ETV Bharat / bharat

ಬಿಜೆಪಿ ಮಾಜಿ ನಾಯಕ ಯಶ್ವಂತ್ ಸಿನ್ಹಾ ಟಿಎಂಸಿ ಸೇರ್ಪಡೆ

ಬಿಜೆಪಿಯ ಮಾಜಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಯಶ್ವಂತ್ ಸಿನ್ಹಾ ಇಂದು ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.

author img

By

Published : Mar 13, 2021, 12:57 PM IST

Former Union Minister Yashwant Sinha joins TMC
ಬಿಜೆಪಿ ಉಚ್ಛಾಟಿತ ನಾಯಕ ಯಶ್ವಂತ್ ಸಿನ್ಹಾ ಟಿಎಂಸಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ತ್ಯಜಿಸಿದ್ದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಯಶ್ವಂತ್ ಸಿನ್ಹಾ ಇಂದು ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೋಲ್ಕತ್ತಾದಲ್ಲಿರುವ ಟಿಎಂಸಿ ಕಚೇರಿಗೆ ಆಗಮಿಸಿದ ಯಶ್ವಂತ್ ಸಿನ್ಹಾ, ಪಕ್ಷದ ಮುಖಂಡ ಸುದೀಪ್​ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಟಿಎಂಸಿಗೆ ಸೇರಿದ್ದಾರೆ.

ಇದನ್ನೂ ಓದಿ: ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥೆ ಇನ್ನಿಲ್ಲ - ಇಂದು ರಾತ್ರಿ ಅಂತ್ಯಸಂಸ್ಕಾರ

2018ರಲ್ಲಿ ಬಿಜೆಪಿ ತೊರೆದಿದ್ದ ಯಶ್ವಂತ್ ಸಿನ್ಹಾ, ಪಿಎಂ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದ್ದು, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡುವ ಪಣ ತೊಟ್ಟಿದ್ದರು.

ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳಿಗೆ ಎಂಟು ಹಂತಗಳಲ್ಲಿ ಮಾರ್ಚ್ 27 ಮತ್ತು ಏಪ್ರಿಲ್ 29 ರವರೆಗೆ ವಿಧಾನಸಭಾ ಚುನಾವಣೆ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.