ETV Bharat / bharat

ಉತ್ತರಾಖಂಡ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ.. ನನ್ನ ಮನವಿ ಪುರಸ್ಕರಿಸಿ ಎಂದ ಮಾಜಿ ಸಿಎಂ ರಾವತ್​ - ಉತ್ತರಾಖಂಡ ಮಾಜಿ ಸಿಎಂ ರಾವತ್​​

ಉತ್ತರಾಖಂಡ ವಿಧಾಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿಗೆ ಬಹುದೊಡ್ಡ ಶಾಕ್​​​ ಆಗಿದೆ. ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

Trivendra Singh Rawat not contest in Uttarakhand polls

author img

By

Published : Jan 19, 2022, 5:38 PM IST

Updated : Jan 19, 2022, 6:05 PM IST

ಡೆಹ್ರಾಡೂನ್​(ಉತ್ತರಾಖಂಡ): ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಗುರುವಾರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಲಿದೆ. ಇದಕ್ಕೂ ಮುನ್ನ ಪಕ್ಷದ ಪ್ರಮುಖ ಮುಖಂಡರೊಬ್ಬರು ಅಚ್ಚರಿ ಎಂಬಂತೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಉತ್ತರಾಖಂಡ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್​ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಈ ಬಾರಿಯ ವಿಧಾಸನಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದಿರುವ ಅವರು, ಪಕ್ಷಕ್ಕಾಗಿ ಕಾರ್ಯಕರ್ತರೊಂದಿಗೆ ಉಳಿದುಕೊಂಡು ದುಡಿಯಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

  • Please accept my request to not contest in Uttarakhand polls so that I focus on supporting the party (in upcoming polls): BJP leader and former Uttarakhand CM Trivendra Singh Rawat writes to BJP national chief JP Nadda pic.twitter.com/qeqenrgGBk

    — ANI UP/Uttarakhand (@ANINewsUP) January 19, 2022 " class="align-text-top noRightClick twitterSection" data=" ">

ಬಿಜೆಪಿಯಿಂದ ಮೊದಲ ಪಟ್ಟಿ ರಿಲೀಸ್​ಗೆ ಸಿದ್ಧತೆ..

ಉತ್ತರಾಖಂಡ ವಿಧಾನಸಭೆಯ ಒಟ್ಟು 70 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ. 14ರಂದು ವೋಟಿಂಗ್ ನಡೆಯಲಿದ್ದು, ಆಡಳಿತ ಪಕ್ಷ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಇದರ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ಕಂಡು ಬಂದಿರುವುದು ಪಕ್ಷದ ನಾಯಕರಿಗೆ ಆಘಾತ ಮತ್ತು ಆತಂಕ ಮೂಡಿಸಿದೆ.

ಇದನ್ನೂ ಓದಿರಿ: ಬಿಜೆಪಿಗೆ ಟಾಂಗ್ ನೀಡಲು ನಿರ್ಧಾರ.. ಗೋವಾದಲ್ಲಿ ಶಿವಸೇನೆ-ಎನ್​ಸಿಪಿ ಮೈತ್ರಿ ಘೋಷಣೆ..

2017ರಲ್ಲಿ ಬಹುಮತದೊಂದಿಗೆ ಭಾರತೀಯ ಜನತಾ ಪಾರ್ಟಿ ಉತ್ತರಾಖಂಡದಲ್ಲಿ ಅಧಿಕಾರಕ್ಕೆ ಬಂದಿತ್ತು. ಸುಮಾರು ನಾಲ್ಕು ವರ್ಷಗಳ ಕಾಲ ತ್ರಿವೇಂದ್ರ ಸಿಂಗ್ ರಾವತ್ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಆದರೆ, ಕಳೆದ ಕೆಲವು ತಿಂಗಳಿಂದ ಸಿಎಂ ಕಾರ್ಯಶೈಲಿ ಬಗ್ಗೆ ಅನೇಕ ಸಚಿವರು, ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಮುಖ್ಯಮಂತ್ರಿಯಾಗಿ ತಿರಥ್ ಸಿಂಗ್ ರಾವತ್ ಆಯ್ಕೆಯಾಗಿದ್ದರು. ಇವರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಸದ್ಯ ಪುಷ್ಕರ್ ಸಿಂಗ್ ಧಾಮಿ ಸಿಎಂ ಆಗಿದ್ದಾರೆ.

Last Updated : Jan 19, 2022, 6:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.