ಶ್ರೀನಗರ( ಜಮ್ಮು ಮತ್ತು ಕಾಶ್ಮೀರ): ನಗರದ ರಾಜೌರಿ ಜಿಲ್ಲೆಯಲ್ಲಿ ಶುಕ್ರವಾರ ತರಬೇತಿ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಮೂಲಗಳ ಪ್ರಕಾರ ನೌಶೇರಾ ಗಡಿ ಪ್ರದೇಶದ ಸೇನಾ ವಲಯದಲ್ಲಿ ನಿತ್ಯದ ಸೇನಾ ತರಬೇತಿ ನಡೆಸಲಾಗುತ್ತದೆ. ಈ ವೇಳೆ ಆಕಸ್ಮಿಕವಾಗಿ ಸ್ಫೋಟಕ ಸಾಧನ ಸ್ಫೋಟಗೊಂಡಿದೆ. ಪರಿಣಾಮ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರನ್ನು ಉಧಂಪುರದ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಘಟನೆಯ ಕುರಿತು ನ್ಯಾಯಾಲಯದ ತನಿಖೆಗೆ ಆದೇಶಿಸಲಾಗಿದೆ.
ಇದನ್ನೂ ಓದಿ: ಭಕ್ತರಿಗೆ ಗುಡ್ನ್ಯೂಸ್: ಫೆ.1ರಿಂದ ಐತಿಹಾಸಿಕ ಪುರಿ ಜಗನ್ನಾಥ ದೇವಾಲಯ ಓಪನ್!