ನವದೆಹಲಿ: ಬೆಲೆ ಏರಿಕೆ, ಹಣದುಬ್ಬರ ಹಾಗೂ ಇತರೆ ವಿಚಾರಗಳನ್ನಿಟ್ಟುಕೊಂಡು ಅಧಿವೇಶನದೊಳಗೆ ಪ್ರತಿಭಟನೆ ನಡೆಸಿದ ನಾಲ್ವರು ಕಾಂಗ್ರೆಸ್ ಸಂಸದರು ಅಮಾನತುಗೊಂಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ. ಲೋಕಸಭೆಯ ಸಂಪೂರ್ಣ ಮಳೆಗಾಲದ ಅಧಿವೇಶನದಿಂದ ಈ ನಾಲ್ವರು ಸಂಸದರನ್ನು ಅಮಾನತುಗೊಳಿಸಲಾಗಿದೆ.
ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಇವರು, ಅಧಿವೇಶನ ನಡೆಯುತ್ತಿದ್ದ ವೇಳೆ ಕೈಯಲ್ಲಿ ಭಿತ್ತಿಪತ್ರ ಹಾಗೂ ಫಲಕ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಇವರಿಗೆ ಸ್ಪೀಕರ್ ಓಂ ಬಿರ್ಲಾ ಈ ಹಿಂದೆ ಎಚ್ಚರಿಕೆ ನೀಡಿದ್ದರು. ಆದರೆ, ಇಂದು ಸಹ ಅದೇ ರೀತಿ ನಡೆದುಕೊಂಡಿದ್ದಾರೆ. ಹೀಗಾಗಿ, ಅಮಾನತು ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಸಂಸದರಾದ ಮಾಣಿಕಂ ಟ್ಯಾಗೋರ್, ಜ್ಯೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿ ಎನ್ ಪ್ರತಾಪನ್ ಲೋಕಸಭೆಯ ಮಳೆಗಾಲ ಅಧಿವೇಶನದಿಂದ ಅಮಾನತುಗೊಂಡವರು.
-
Four Congress Lok Sabha MPs including Manickam Tagore, Ramya Haridas, Jothimani and TN Prathapan suspended for the entire Monsoon session pic.twitter.com/p2qb2oKshf
— ANI (@ANI) July 25, 2022 " class="align-text-top noRightClick twitterSection" data="
">Four Congress Lok Sabha MPs including Manickam Tagore, Ramya Haridas, Jothimani and TN Prathapan suspended for the entire Monsoon session pic.twitter.com/p2qb2oKshf
— ANI (@ANI) July 25, 2022Four Congress Lok Sabha MPs including Manickam Tagore, Ramya Haridas, Jothimani and TN Prathapan suspended for the entire Monsoon session pic.twitter.com/p2qb2oKshf
— ANI (@ANI) July 25, 2022
ಲೋಕಸಭೆ ಕಲಾಪ ಆರಂಭವಾದಾಗಿನಿಂದಲೂ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಸದನದಲ್ಲಿ ಗದ್ದಲ ನಡೆಸುತ್ತಿವೆ. ಬೆಲೆ ಏರಿಕೆ, ಜಿಎಸ್ಟಿ ಹಾಗೂ ಹಣದುಬ್ಬರ ಸೇರಿದಂತೆ ಅನೇಕ ವಿಚಾರಗಳನ್ನಿಟ್ಟುಕೊಂಡು ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕ್ತಿವೆ. ಹೀಗಾಗಿ, ಸುಗಮ ಸದನ ನಡೆಯುತ್ತಿಲ್ಲ. ಇದೇ ವಿಚಾರವಾಗಿ ಸ್ಪೀಕರ್ ಇಂದು ವಿರೋಧ ಪಕ್ಷದ ಸದಸ್ಯರಿಗೆ ಎಚ್ಚರಿಕೆ ಸಹ ನೀಡಿದ್ದು, ಕೇಂದ್ರ ಸರ್ಕಾರ ಚರ್ಚೆಗೆ ಸಿದ್ಧವಿದೆ ಎಂಬ ಮಾತನ್ನು ಹೇಳಿದ್ದರು. ಆದರೆ, ಪ್ರತಿಪಕ್ಷಗಳು ತಮ್ಮ ಪಟ್ಟು ಸಡಿಲಿಸದೇ ಗದ್ದಲ-ಗಲಾಟೆ ಮುಂದುವರೆಸಿವೆ.
ಇದನ್ನೂ ಓದಿರಿ: ಜನಸಂಖ್ಯೆ ನಿಯಂತ್ರಣ ಕಾಯ್ದೆ ರೂಪಿಸುವ ಸಂಸದರಿಗೆ ಮಕ್ಕಳೆಷ್ಟು ಗೊತ್ತೇ?