ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಸ್ಟೇಡಿಯಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋರಿಕ್ಷಾದಲ್ಲಿ ಸವಾರಿ ಮಾಡುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಕಂಟೈನರ್ವೊಂದು ಪಲ್ಟಿಯಾಗಿ ಆಟೋ ಮೇಲೆ ಬಿದ್ದಿದೆ. ಪರಿಣಾಮ ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಂಟೈನರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಮೃತರ ಗುರುತು ಪತ್ತೆ ಹಚ್ಚಲು ಇನ್ನೂ ಸಾಧ್ಯವಾಗಿಲ್ಲ.
ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದ ಕಾರು; ಇಬ್ಬರು ಕಿರಿಯ ಕಲಾವಿದರು ಸೇರಿ ಮೂವರು ಸಾವು
ಸ್ಥಳಕ್ಕೆ ದೌಡಾಯಿಸಿದ ಐಪಿ ಸ್ಟೇಟ್ ಠಾಣೆಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದು, ಕಂಟೈನರ್ ಚಾಲಕನಿಗಾಗಿ ಬಲೆ ಬೀಸಿದ್ದಾರೆ.