ETV Bharat / bharat

ಟರ್ಪಂಟೈನ್​ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ: ಮೂವರು ಮಕ್ಕಳು ಸೇರಿ ನಾಲ್ವರು ದುರ್ಮರಣ - ತೈಲ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸಾವು

Fire in Turpentine Oil Manufacturing Factory: ರಾಜಸ್ಥಾನದ ಜಾಮ್ವಾ ರಾಮ್‌ಗಢದಲ್ಲಿರುವ ಟರ್ಪಂಟೈನ್ ತೈಲ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ. ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Four die as massive breaks out in a factory at Jamwa Ramgarh in Jaipur
ತೈಲ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ
author img

By

Published : Jan 30, 2022, 4:18 PM IST

Updated : Jan 30, 2022, 5:10 PM IST

ಜೈಪುರ: ರಾಜಸ್ಥಾನದ ಜಾಮ್ವಾ ರಾಮ್​​​ಗಢದಲ್ಲಿರುವ ಟರ್ಪಂಟೈನ್ ತೈಲ ತಯಾರಿಕಾ ಘಟಕದಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.

ತೈಲ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ

ಮಾಹಿತಿ ಪಡೆದ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರನ್ನು ಈ ಕುರಿತು ವಿಚಾರಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕ ಸೇವೆ ಮೂಲಕ ಮಿಲಿಯನೇರ್​ಗಳಾದ ಉತ್ತರಾಖಂಡ್ ರಾಜಕಾರಣಿಗಳು

ಕಾರ್ಖಾನೆ ಮಾಲೀಕರು ಸ್ವಂತ ಮನೆಯಲ್ಲೇ ಕಾರ್ಖಾನೆ ಸ್ಥಾಪಿಸಿದ್ದರು ಎಂದು ತಿಳಿದುಬಂದಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದ ಬಿಜೆಪಿ ಮುಖಂಡ ಮಹೇಂದ್ರ ಪಾಲ್ ಮೀನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 30, 2022, 5:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.