ಕಡಲೂರು(ತಮಿಳುನಾಡು): ಇಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ್ದಾರೆ.
ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ್ದು, ಘಟನೆಯಲ್ಲಿ 12ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಕೈಗೊಂಡಿತು. ಕೂಡಲೇ ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.
ಸುದ್ದಿ ತಿಳಿದ ಮೃತರ ಮತ್ತು ಗಾಯಾಳುಗಳ ಸಿಬ್ಬಂದಿ ಆಸ್ಪತ್ರೆಗೆ ದೌಡಾಯಿಸಿದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಆಸ್ಪತ್ರೆಗೆ ದೌಡಾಯಿಸಿ ಸಂತ್ರಸ್ತರ ಸಂಬಂಧಿಕರಿಗೆ ಸಾಂತ್ವನ ಹೇಳುತ್ತಿದ್ದಾರೆ.