ETV Bharat / bharat

ಮರಕ್ಕೆ ಡಿಕ್ಕಿ ಹೊಡೆದ ಕಾರು​.. ನಾಲ್ವರು ಸಾವು, ಇಬ್ಬರ ಸ್ಥಿತಿ ಗಂಭೀರ! - ಗೌರ್​ ರಸ್ತೆ ಅಪಘಾತ,

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ನಾಗೌರ್​ ಜಿಲ್ಲೆಯಲ್ಲಿ ನಡೆದಿದೆ.

four died, four died in road accident, four died in road accident in Nagaur, Nagaur road accident, Nagaur road accident news, ನಾಲ್ವರು ಸಾವು, ರಸ್ತೆ ಅಪಘಾತದಲ್ಲಿ ನಾಲ್ವರು ಸಾವು, ನಾಗೌರ್​ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು, ನಾಗೌರ್​ ರಸ್ತೆ ಅಪಘಾತ, ನಾಗೌರ್​ ರಸ್ತೆ ಅಪಘಾತ ಸುದ್ದಿ,
ಮರಕ್ಕೆ ಡಿಕ್ಕಿ ಹೊಡೆದ ಕ್ಯಾಂಪರ್​ ಕಾರು
author img

By

Published : Feb 10, 2021, 9:42 AM IST

ನಾಗೌರ್(ರಾಜಸ್ಥಾನ)​: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗೌರ್​ನ ನಾಗಡಿ ರಸ್ತೆಯಲ್ಲಿ ಸಂಭವಿಸಿದೆ.

ಮರಕ್ಕೆ ಡಿಕ್ಕಿ ಹೊಡೆದ ಕಾರು, ನಾಲ್ವರು ಸಾವು

ವೇಗವಾಗಿ ಪ್ರಯಾಣಿಸುತ್ತಿದ್ದ ಕಾರ್​ ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಾಳುಗಳಿಗೆ ಖೇವ್ಸರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃತದೇಹಗಳನ್ನು ಶವಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮಾಹಿತಿ ಪಡೆದ ನಾಗೌರ್ ಅಧಿಕಾರಿ ವಿನೋದ್ ಕುಮಾರ್ ಪರಿಶೀಲನೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.