ರೇವಾಡಿ(ಹರಿಯಾಣ): ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ನೇಹಿತರು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಜಿಲ್ಲೆಯ ನಾರ್ನೌಲ್ ರಸ್ತೆಯಲ್ಲಿ ಸಂಭವಿಸಿದೆ.
ಘಟನೆಯ ವಿವರ
ಮಹೇಂದ್ರಗಡ್ ಜಿಲ್ಲೆಯ ಖೆರಾಲಿ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದ ವೇಳೆ i-10 ಕಾರ್ಗೆ ಡಂಪರ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ದಿವಾಕರ್ ಮತ್ತು ತರುಣ್ ಇಬ್ಬರು ತಮ್ಮ ತಂದೆ-ತಾಯಿಗಳಿಗೆ ಒಬ್ಬೊಬ್ಬರೇ ಮಕ್ಕಳು. ಇವರಿಬ್ಬರು ದೆಹಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮದುವೆ ಹಿನ್ನೆಲೆಯಲ್ಲಿ ಮತ್ತು ಲಾಕ್ಡೌನ್ ಕಾರಣ ಗ್ರಾಮದಲ್ಲೇ ತಂಗಿದ್ದರು. ಆದ್ರೆ ಅಪಘಾತದಲ್ಲಿ ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಇನ್ನಿಬ್ಬರು ಯುವಕರಿಗೆ ಇತ್ತೀಚೆಗೆ ಮದುವೆಯಾಗಿತ್ತು. ಖಾಸಗಿ ಕಂಪನಿಯೊಂದರಲ್ಲಿ ಇವರು ಕೆಲಸ ಮಾಡುತ್ತಾ ಕುಟುಂಬ ಸಾಗಿಸುತ್ತಿದ್ದರು. ಈಗ ನಡೆದ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಈ ಬಗ್ಗೆ ಗಾಯಾಳು ದೀಪಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.