ಗಿರಿದಿಹ್ (ಜಾರ್ಖಂಡ್): ಜಾರ್ಖಂಡ್‌ನ ಗಿರಿಧ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭಾರಿ ದುರಂತ ನಡೆದಿದೆ. 'ಕರ್ಮ ಪೂಜೆ'ಯ ವಿಧಿವಿಧಾನಗಳನ್ನು ನಿರ್ವಹಿಸುತ್ತಿದ್ದಾಗ ನಾಲ್ವರು ಬಾಲಕಿಯರು ನೀರಿನ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿನ ಪಚಂಬಾ ಪೊಲೀಸ್ ಠಾಣಾ ವ್ಯಾಪ್ತಿಯ ಪೆಥಿಯಾತಂಡ್ ಬಳಿಯ ಸೋನಾ ಮಹತೋ ಕೊಳದಲ್ಲಿ ಈ ದುರ್ಘಟನೆ ಜರುಗಿದೆ. ಹಂದಾಡಿ ಪ್ರವೇಶದಿಂದ ಐವರು ಬಾಲಕಿಯರು ಪೂಜೆಗಾಗಿ ಮಣ್ಣು ಸಂಗ್ರಹಿಸಿ ಹೊಂಡದಲ್ಲಿ ಸ್ನಾನ ಮಾಡುತ್ತಿದ್ದರು. ಈ ವೇಳೆ, ನೀರಿನ ಆಳಕ್ಕೆ ಇಳಿದಾಗ ಐವರ ಪೈಕಿ ನಾಲ್ವರು ನೀರಿನಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೀರಿನ ಮುಳುಗಿದ್ದ ಬಾಲಕಿಯರು ಹೊರಬರಲು ಪ್ರಯತ್ನಿಸಿದ್ದರು. ಈ ವೇಳೆ, ಇದನ್ನು ಕಂಡ ಗ್ರಾಮಸ್ಥರು ಕೂಡಲೇ ಬಾಲಕಿಯರ ರಕ್ಷಣೆಗೆ ಧಾವಿಸಿದ್ದರು. ಆಗ ಮೂರು ಬಾಲಕಿಯರನ್ನು ಕೊಳದಿಂದ ಹೊರೆತೆಗೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಉಳಿದ ಇಬ್ಬರು ಬಾಲಕಿಯರನ್ನು ಸುದೀರ್ಘ ಕಾಲ ಪ್ರಯತ್ನಪಟ್ಟ ನಂತರ ಪತ್ತೆಯಾಗಿದ್ದರು. ಇದಾದ ಬಳಿಕ ಐವರನ್ನೂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಕೊನೆಯುಸಿರೆಳೆದಿದ್ದಾರೆ. ಇನ್ನೋರ್ವ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮತ್ತೊಂದೆಡೆ, ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಉಪ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ರಾಮ ಮತ್ತು ಪಚಂಬಾ ಪೊಲೀಸ್ ಠಾಣೆಯ ಹಲವು ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿದರು. ಈ ವೇಳೆ, ಪಚಂಬಾ ಪೊಲೀಸ್ ಠಾಣೆಯ ಪ್ರಭಾರಿ ಮುಖೇಶ್ ದಯಾಳ್ ಸಿಂಗ್ ಮಾತನಾಡಿ, ಕರ್ಮಪೂಜೆಯಂದು ಬಾಲಕಿಯರ ಗುಂಪು ಸ್ನಾನಕ್ಕೆಂದು ಹೊಂಡಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ನಾಲ್ವರ ಬಾಲಕಿಯರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ಒಬ್ಬ ಹುಡುಗಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಮುಜಾಫರ್ಪುರ ದೋಣಿ ದುರಂತ: ನಾಪತ್ತೆಯಾಗಿದ್ದ 12 ಮಕ್ಕಳ ಮೃತದೇಹ ಪತ್ತೆ
ಬಿಹಾರದಲ್ಲಿ 12 ಮಕ್ಖಳ ಸಾವಿನ ಪ್ರರಕಣ: ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಸೆಪ್ಟೆಂಬರ್ 14ರಂದು ಭಾರಿ ದುರಂತ ಸಂಭವಿಸಿತ್ತು. ಬಾಗಮತಿ ನದಿಯಲ್ಲಿ 30ಕ್ಕೂ ಹೆಚ್ಚು ಮಕ್ಕಳನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಿತ್ತು. ಇದರಿಂದ 12 ಮಕ್ಕಳು ನಾಪತ್ತೆಯಾಗಿದ್ದರು. ಮರು ದಿನ ಈ ಮಕ್ಕಳ ಮೃತದೇಹಗಳು ಪತ್ತೆಯಾಗಿದ್ದವು.
ಬೆನೀವಾದ ವ್ಯಾಪ್ತಿಯ ಮಧುರಪಟ್ಟಿ ಘಾಟ್ನಲ್ಲಿ ತುಂಬಿ ಹರಿಯುತ್ತಿದ್ದ ಬಾಗಮತಿ ನದಿಯಲ್ಲಿ ಈ ಘಟನೆ ನಡೆದಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್)ಗಳ ತುರ್ತು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದರು.
ಇದನ್ನೂ ಓದಿ: ಕೆರೆಯಲ್ಲಿ ಮುಳುಗಿ ಮೂವರು ಸಹೋದರಿಯರು ಸಾವು: ತಂಗಿಯ ರಕ್ಷಣೆಗೆ ತೆರಳಿದ್ದ ಅಕ್ಕಂದಿರು!