ETV Bharat / bharat

ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಮಹಾರಾಷ್ಟ್ರದ ಕಲ್ವಾದಲ್ಲಿ ಭಾನುವಾರ ರಾತ್ರಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

gas cylinder blast in Maharashtra
ಮಹಾರಾಷ್ಟ್ರದ ಕಲ್ವಾದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ
author img

By

Published : Mar 21, 2022, 1:37 PM IST

ಥಾಣೆ (ಮಹಾರಾಷ್ಟ್ರ): ಕಳೆದ ರಾತ್ರಿ ಮಹಾರಾಷ್ಟ್ರದ ಕಲ್ವಾದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಸತ್ಯಂ ಮಂಗಲ್ ಯಾದವ್, ಅನುರಾಗ್ ಸಿಂಗ್, ರೋಹಿತ್ ಯಾದವ್ ಮತ್ತು ಗಣೇಶ್ ಗುಪ್ತಾ ಎಂದು ಗುರುತಿಸಲಾಗಿದೆ. ಕಲ್ವಾದ ಶಿವಶಕ್ತಿ ನಗರದಲ್ಲಿರುವ 'ಭಾರತ್ ಗ್ಯಾಸ್ ಏಜೆನ್ಸಿ' ಕಚೇರಿಯಲ್ಲಿ ಭಾನುವಾರ ರಾತ್ರಿ 11.30ಕ್ಕೆ ಈ ಘಟನೆ ನಡೆದಿದೆ. ದುರ್ಘಟನೆಯಲ್ಲಿ ನಾಲ್ವರಿಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ. ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಕಲ್ವಾದ ಛತ್ರಪತಿ ಶಿವಾಜಿ ಮಹಾರಾಜ್ (CSM) ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ನಕಲಿ ಮದ್ಯ ಸೇವನೆ : ಬಿಹಾರದಲ್ಲಿ 37 ಮಂದಿ ಸಾವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.