ETV Bharat / bharat

ಪತ್ನಿ ನೆರವಿಗೆ ಧಾವಿಸಿದ ಪತಿ, ತಂದೆ-ತಾಯಿ ಎಬ್ಬಿಸಲು ಹೋದ ಮಕ್ಕಳು; ವಿದ್ಯುತ್ ಶಾಕ್‌ಗೆ ನಾಲ್ವರು ಬಲಿ - ಕಾಮರೆಡ್ಡಿ ಅಪರಾಧ ಸುದ್ದಿ

ತೆಲಂಗಾಣದಲ್ಲಿ ಭೀಕರ ದುರಂತವೊಂದು ಘಟಿಸಿದೆ. ಯಮನ ರೂಪದಲ್ಲಿ ಅಪ್ಪಳಿಸಿದ ವಿದ್ಯುದಾಘಾತ ಕುಟುಂಬದ ನಾಲ್ವರನ್ನು ಬಲಿ ಪಡೆಯಿತು.

Four members of family died in Telangana, Four members of family died due to electrical shock, Kamareddy crime news, Telangana news, ತೆಲಂಗಾಣದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು, ವಿದ್ಯುತ್​ ಶಾಕ್​ನಿಂದ ಒಂದೇ ಕುಟುಂಬದ ನಾಲ್ವರು ಸಾವು, ಕಾಮರೆಡ್ಡಿ ಅಪರಾಧ ಸುದ್ದಿ, ತೆಲಂಗಾಣ ಸುದ್ದಿ
ನಾಲ್ವರು ಸಾವು
author img

By

Published : Jul 13, 2022, 9:23 AM IST

ಕಾಮರೆಡ್ಡಿ(ತೆಲಂಗಾಣ): ವಿದ್ಯುತ್ ಶಾಕ್‌ ಹೊಡೆದು ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನೊಂದು ಮಗು ಪ್ರಾಣಾಪಾಯದಿಂದ ಪಾರಾಗಿದೆ. ಇಂಥದ್ದೊಂದು ಹೃದಯವಿದ್ರಾವಕ ಘಟನೆ ಇಲ್ಲಿನ ಬೀಡಿ ವರ್ಕರ್ಸ್​ ಕಾಲೋನಿಯಲ್ಲಿ ನಡೆದಿದೆ.

ಆಟೋ ಚಾಲಕನಾದ ಕಾಲೋನಿಯ ಅಹಮದ್ (35), ಪತ್ನಿ ಪರ್ವೀನ್ (30), ಮಗಳು ಮಹಿಮ್ (6), ಮಕ್ಕಳಾದ ಫೈಜಾನ್ (5) ಮತ್ತು ಅದ್ನಾನ್ (3) ಸಣ್ಣ ಹುಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದರು. ಮಳೆ ಕಾರಣಕ್ಕೆ ಮಂಗಳವಾರ ಶಾಲೆಗೆ ರಜೆ ನೀಡಲಾಗಿತ್ತು. ಫೈಜಾನ್​ನನ್ನು ಅಜ್ಜಿ ಮನೆಯಲ್ಲಿ ಬಿಟ್ಟು, ಉಳಿದವರು ಮನೆಯಲ್ಲಿದ್ದರು.

ಮನೆಗೋಡೆಗೆ ಕಟ್ಟಿದ್ದ ಕಬ್ಬಿಣದ ತಂತಿ ಮೇಲೆ ಬಟ್ಟೆ ಒಣಗಿಸುತ್ತಿದ್ದಾಗ ಪರ್ವೀನ್​ಗೆ ವಿದ್ಯುತ್ ಸ್ಪರ್ಶಿಸಿದೆ. ಕೂಡಲೇ ಆಕೆಯನ್ನು ರಕ್ಷಿಸಲು ಧಾವಿಸಿದ ಅಹಮದ್‌ಗೂ ಶಾಕ್ ಹೊಡೆದಿದೆ. ತಂದೆ-ತಾಯಿ ಕುಸಿದು ಬೀಳುವುದನ್ನು ಕಂಡ ಮಗಳು ಮಹೀಮ್ ಮತ್ತು ಮಗ ಅದ್ನಾನ್​ ಇಬ್ಬರು ಜೋರಾಗಿ ಕಿರುಚುತ್ತಾ ಪೋಷಕರ ಬಳಿ ಹೋಗಿದ್ದಾರೆ. ಆಗ ಅವರಿಗೂ ವಿದ್ಯುತ್ ಸ್ಪರ್ಶಿಸಿದೆ. ಹೀಗೆ ಒಬ್ಬರ ಬಳಿಕ ಮತ್ತೊಬ್ಬರಂತೆ ವಿದ್ಯುತ್​ ತಗಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರು.

ಇದನ್ನೂ ಓದಿ: ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ಸಾವು.. ಗ್ರಾಮಸ್ಥರ ಆಕ್ರೋಶ, ಹೆಡ್​ಮಾಸ್ಟರ್ ಸಸ್ಪೆಂಡ್​

ಮಕ್ಕಳ ಆಕ್ರಂದನ ಕೇಳಿದ ಅಕ್ಕಪಕ್ಕದ ಮನೆಯವರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ತಕ್ಷಣವೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿ, ನಾಲ್ವರ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದರು. ಅಷ್ಟರಲ್ಲಿ ಅವರೆಲ್ಲರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಪರ್ವೀನ್ ತಂದೆ ಹಕೀಂ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರ 3 ಲಕ್ಷ ರೂಪಾಯಿ ಪರಿಹಾರ ನೀಡಲಿದೆ ಎಂದು ಸಚಿವ ವೇಮುಲ ಪ್ರಶಾಂತ್ ರೆಡ್ಡಿ ತಿಳಿಸಿದ್ದಾರೆ.ತಂದೆ-ತಾಯಿ, ಅಕ್ಕ-ತಮ್ಮನನ್ನು ಕಳೆದುಕೊಂಡು ಅನಾಥವಾಗಿರುವ ಪುತ್ರ ಫೈಜಾನ್​ನ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದು ಸಚಿವರು ಭರವಸೆ ಕೊಟ್ಟಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.