ETV Bharat / bharat

ಖಾಸಗಿ ಬಸ್ - ಟ್ರ್ಯಾಕ್ಟರ್​ ಮಧ್ಯೆ ಅಪಘಾತ: ನಾಲ್ವರು ಸಾವು

ಖಾಸಗಿ ಬಸ್​ ಮತ್ತು ಟ್ರ್ಯಾಕ್ಟರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ.

ಖಾಸಗಿ ಬಸ್ - ಟ್ರ್ಯಾಕ್ಟರ್​ ಮಧ್ಯೆ ಅಪಘಾತ
ಖಾಸಗಿ ಬಸ್ - ಟ್ರ್ಯಾಕ್ಟರ್​ ಮಧ್ಯೆ ಅಪಘಾತ
author img

By ETV Bharat Karnataka Team

Published : Dec 23, 2023, 2:14 PM IST

ಅನಂತಪುರ​, ಆಂಧ್ರಪ್ರದೇಶ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್​ ಮತ್ತು ಟ್ರ್ಯಾಕ್ಟರ್​ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇಂದು ಬೆಳಗಿನ ಜಾವ ಗರ್ಲದಿನ್ನೆ ತಾಲೂಕಿನ ಕಲ್ಲೂರಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಅಕ್ಕಿಯ ಲೋಡ್​ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಖಾಸಗಿ ಟ್ರಾವೆಲ್ಸ್​ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಗುತ್ತಿ ತಾಲೂಕಿನ ಮಾಮಿದೂರಿನ ಚಿನ್ನತಿಪ್ಪಯ್ಯ (45), ಶ್ರೀರಾಮುಲು (45), ನಾಗಾರ್ಜುನ (30) ಮತ್ತು ಶ್ರೀನಿವಾಸುಲು (30) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಬಸ್ ಚಾಲಕ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಅಪಘಾತ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಬಳಿಕ ಮೃತರ ಸಂಬಂಧಿಕರು, ಸರಕಾರ ಕೂಡಲೇ ಘಟನೆಗೆ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ಹೇಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಧರಣಿ ನಡೆಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸದಂತೆ ತಡೆಯಲಾಗಿತ್ತು. ಇದರಿಂದಾಗಿ ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಎರಡೂ ಬದಿಯಲ್ಲಿ ವಾಹನ ದಟ್ಟನೆ ಉಂಟಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಇತ್ತೀಚಿನ ಘಟನೆಗಳು: ಕ್ವಾಲಿಸ್​ ಕಾರು ಮತ್ತು ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಆರು ಜನರು ಮೃತಪಟ್ಟ ಘಟನೆ ಮಹಾರಾಷ್ಟ್ರದ ನಾಗ್ಪುರ ಸಮೀಪ ಕಳೆದ ವಾರ ಸಂಭವಿಸಿತ್ತು. ಮದುವೆ ಸಮಾರಂಭದಿಂದ ಹಿಂತಿರುಗುತ್ತಿರುವಾಗ ಈ ದುರಂತ ನಡೆದಿತ್ತು.

ಮೃತರನ್ನು ಮಯೂರ್ ಇಂಗಳೆ, ವೈಭವ್ ಚಿಖಲೆ, ಸುಧಾಕರ್​ ಮಾನಕರ್​, ವಿಠ್ಠಲ್ ತೋಟೆ, ಅಜಯ್ ಚಿಖಲೆ ಮತ್ತು ರಮೇಶ ಹಲೊಂಡೆ ಎಂದು ಗುರುತಿಸಲಾಗಿತ್ತು. ಜಗದೀಶ್ ಧೋನ್ ಎಂವುವವರು ಗಂಭೀರವಾಗಿ ಗಾಯಗೊಂಡಿದ್ದರು. ಇವರೆಲ್ಲರೂ ನಾಗ್ಪುರ ಜಿಲ್ಲೆಯ ಕಟೋಲ್ ತಾಲೂಕಿನ ಮೆಂಡಿಪಥರ್ ಗ್ರಾಮದವರು ಎಂದು ತಿಳಿದು ಬಂದಿತ್ತು. ನಾಗ್ಪುರದಿಂದ ಕಟೋಲ್ ಕಡೆಗೆ ಹೋಗುತ್ತಿದ್ದಾಗ ಸೋಂಖಾಂಬ್ ಮತ್ತು ತಾರಾಬೋಡಿ ಗ್ರಾಮಗಳ ಮಧ್ಯೆ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿತ್ತು.

8 ಮಂದಿ ಸಜೀವ ದಹನ: ರಸ್ತೆ ಅಪಘಾತದ ನಂತರ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಎಂಟು ಮಂದಿ ಸಜೀವ ದಹನವಾಗಿದ್ದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ಇತ್ತೀಚೆಗೆ ನಡೆದಿತ್ತು. ಘಟನೆಯಲ್ಲಿ ಪುಟ್ಟ ಮಗು, ನವವಿವಾಹಿತ ಜೋಡಿ ಸೇರಿ ಎಂಟು ಮಂದಿ ಸಾವನ್ನಪ್ಪಿದ್ದರು. ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಕಾರಿನ ಟೈಯರ್​ ಸ್ಫೋಟಗೊಂಡು ದುರಂತ ಸಂಭವಿಸಿತ್ತು. ಮೃತರೆಲ್ಲರೂ ಬಹೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಾಮ್ ನಗರದ ನಿವಾಸಿಗಳು ಎಂದು ಪತ್ತೆಹಚ್ಚಲಾಗಿತ್ತು.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್: ಮೂವರ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.