ಚಿಂದ್ವಾರ(ಮಧ್ಯಪ್ರದೇಶ): ಜಿಲ್ಲೆಯಲ್ಲಿಂದು ಟ್ರಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಓರ್ವ ಬಾಲಕಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 47ರಲ್ಲಿ ವೇಗವಾಗಿ ಬಂದ ಟ್ರಕ್ವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದ್ದಲ್ಲೇ ಮೃತಪಟ್ಟಿದ್ದು, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಚಿಕಿತ್ಸೆಗಾಗಿ ಬಾಲಕಿಯನ್ನು ಪಾಂಡುರ್ಣ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸಾರಿಗೆ ಬಸ್ ಮತ್ತು ಕಾರು ನಡುವೆ ಅಪಘಾತ: ಇಬ್ಬರ ಸಾವು