ETV Bharat / bharat

ಟ್ರಕ್​​-ಜೀಪ್​ ನಡುವೆ ಡಿಕ್ಕಿ: ಗಂಗಾ ಸ್ನಾನ ಮಾಡಿ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸಾವು - ರೇವಾ ಜಿಲ್ಲೆ

ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

madhya pradesh road accident
madhya pradesh road accident
author img

By

Published : Sep 25, 2021, 10:10 AM IST

ರೇವಾ (ಮಧ್ಯಪ್ರದೇಶ): ಎದುರಿನಿಂದ ಬರುತ್ತಿದ್ದ ಟ್ರಕ್​ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ರೇವಾ ಜಿಲ್ಲೆಯಲ್ಲಿ ತಡರಾತ್ರಿ ನಡೆದಿದೆ.

ಮೃತರೆಲ್ಲರೂ ಮಧ್ಯಪ್ರದೇಶದ ರೈಸೆನ್‌ ಮೂಲದವರಾಗಿದ್ದು, ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಹಿಂದಿರುಗುತ್ತಿದ್ದರು. ಈ ವೇಳೆ ರೇವಾದಲ್ಲಿ ಅಪಘಾತ ಸಂಭವಿಸಿದೆ. ರಸ್ತೆ ಮೇಲೆ ನಾಯಿಯೊಂದು ಅಡ್ಡ ಬಂದಿದ್ದು, ಜೀಪ್ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರಕ್​ಗೆ ಗುದ್ದಿದ್ದಾನೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: REET ಪರೀಕ್ಷೆಗೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಸೇರಿ 6 ಜನ ದುರ್ಮರಣ

ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳನ್ನು ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಚೋರ್ಹಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.