ಪಾಣಿಪತ್ (ಹರಿಯಾಣ): ಪಾಣಿಪತ್ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ. ಮಟ್ಲೌಡಾ ರಿಫೈನರಿ ರಸ್ತೆಯ ಎರಡು ಶಿಬಿರಗಳಲ್ಲಿ ಕಳೆದ ತಡರಾತ್ರಿ ನಾಲ್ವರು ದರೋಡೆಕೋರರು ಬಂದೂಕಿನಿಂದ ಬೆದರಿಸಿ ನಾಲ್ವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ತಡರಾತ್ರಿ ದರೋಡೆಕೋರರು ಮಟ್ಲೌಡಾ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಂಪ್‌ಗೆ ನುಗ್ಗಿ ಅಲ್ಲಿದ್ದ ಎಲ್ಲರನ್ನೂ ಒತ್ತೆಯಾಳಾಗಿರಿಸಿದ್ದರು. ನಂತರ ಶಿಬಿರವನ್ನು ಲೂಟಿ ಮಾಡಿದ್ದಾರೆ. ಕುಟುಂಬಸ್ಥರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಶಿಬಿರದ ಜನರನ್ನು ಲೂಟಿಗೈದ ಬಳಿಕ ಅಲ್ಲಿಂದ ಸ್ವಲ್ಪ ದೂರದಲ್ಲಿ ಕಳ್ಳರು ಮೀನು ಸಾಕಣೆ ಕೇಂದ್ರವನ್ನು ಗುರಿಯಾಗಿಸಿಕೊಂಡರು. ಮೀನು ಸಾಕಾಣಿಕೆ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಗಂಡ-ಹೆಂಡತಿಯನ್ನು ಒತ್ತೆಯಾಳಾಗಿಟ್ಟುಕೊಂಡ ಕಳ್ಳರು, ನಗದು ಹಾಗೂ ಚಿನ್ನಾಭರಣ ದೋಚಿದ್ದರು. ಇದಾದ ಬಳಿಕ ರಾತ್ರಿಯಿಡೀ ಮಹಿಳೆಯ ಮೇಲೆ ದರೋಡೆಕೋರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮಹಿಳೆಯೊಬ್ಬರು ದರೋಡೆಕೋರರ ವಿರುದ್ಧ ತಿರುಗಿಬಿದ್ದಾಗ ಆಕೆಯನ್ನು ಕೊಲೆ ಮಾಡಿದ್ದಾರೆ. ಕೊಲೆಯಾದ ಮಹಿಳೆ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.
ಬೆಳಗ್ಗೆ ಸಂತ್ರಸ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಸಂತ್ರಸ್ತರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡರು. ಸಂತ್ರಸ್ತರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಪಾಣಿಪತ್ ಜನರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಎಫ್‌ಎಸ್‌ಎಲ್ ತಂಡ ಕೂಡ ಸ್ಥಳಕ್ಕಾಗಮಿಸಿ ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಪೊಲೀಸರು ಮಹಿಳೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ರಿಫೈನರಿ ಬಳಿ ಕ್ಯಾಂಪ್‌ಗೆ ನುಗ್ಗಿದ ದರೋಡೆಕೋರರು ಅಲ್ಲಿದ್ದ ಎಲ್ಲರನ್ನೂ ಕಟ್ಟಿಹಾಕಿ ಲೂಟಿ ಮಾಡಿದ್ದಾರೆ. ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಸಂತ್ರಸ್ತ ಮಹಿಳೆಯರನ್ನು ಪಾಣಿಪತ್ ಜನರಲ್ ಆಸ್ಪತ್ರೆಗೆ ವೈದ್ಯಕೀಯ ಚಿಕಿತ್ಸೆಗಾಗಿ ದಾಖಲು ಮಾಡಿಸಿದ್ದಾರೆ. ವೈದ್ಯಕೀಯ ವರದಿಯಲ್ಲಿ ಸಾಮೂಹಿಕ ಅತ್ಯಾಚಾರ ದೃಢಪಟ್ಟ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಮಟ್ಲೌಡಾ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿನೋದ್ ಕುಮಾರ್ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಇದನ್ನೂ ಓದಿ: ಬೆಂಗಳೂರು: ಮಹಿಳಾ ಟೆಕ್ಕಿಯಿಂದ 'ಲವ್ ಜಿಹಾದ್' ದೂರು; ಕಾಶ್ಮೀರಕ್ಕೆ ತೆರಳಿದ ಪೊಲೀಸರು