ETV Bharat / bharat

ಏ.1ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ : ಪ್ರಕಾಶ್ ಜಾವ್ಡೇಕರ್ - ಕೊರೊನಾ ಲಸಿಕೆ ಅಪ್​ಡೇಟ್

corona vaccine
corona vaccine
author img

By

Published : Mar 23, 2021, 3:20 PM IST

Updated : Mar 23, 2021, 4:00 PM IST

15:15 March 23

45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ವ್ಯಾಕ್ಸಿನೇಷನ್​ಗಾಗಿ ನೋಂದಾಯಿಸಿಕೊಳ್ಳಬೇಕೆಂದು ಮನವಿ..

ನವದೆಹಲಿ : ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣದಿಂದ ಏಪ್ರಿಲ್ 1ರಿಂದ 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ನಾಗರಿಕರಿಗೆ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಈ ಕುರಿತು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಾಹಿತಿ ನೀಡಿದ್ದಾರೆ. 45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ವ್ಯಾಕ್ಸಿನೇಷನ್​ಗಾಗಿ ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು. 

ಪ್ರಸ್ತುತ ಕೇವಲ 60 ವರ್ಷ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಇತರ ಕಾಯಿಲೆಗಳಿಂದ ನರಳುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ಪಡೆಯಲು ಅವಕಾಶವಿದೆ.

ಕೊರೊನಾ ವೈರಸ್ ಟಾಸ್ಕ್‌ಫೋರ್ಸ್ ಮತ್ತು ತಜ್ಞರ ಸಲಹೆಯ ಆಧಾರದ ಮೇಲೆ ಈ ನಿರ್ಧಾರವನ್ನು ಕೇಂದ್ರ ಕ್ಯಾಬಿನೆಟ್ ತೆಗೆದುಕೊಂಡಿದೆ ಎಂದು ಜಾವ್ಡೇಕರ್ ಹೇಳಿದ್ದಾರೆ. ಈವರೆಗೆ 4.85 ಕೋಟಿ ಮಂದಿ ಒಂದು ಡೋಸ್ ಪಡೆದಿದ್ದು, 80 ಲಕ್ಷ ಮಂದಿ ಕೊರೊನಾ ವ್ಯಾಕ್ಸಿನ್​ನ 2ನೇ ಡೋಸ್ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Last Updated : Mar 23, 2021, 4:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.