ನವದೆಹಲಿ: ಅಡುಗೆ ಅನಿಲ ಮತ್ತು ತೈಲ ಬೆಲೆ ಏರಿಕೆ ಖಂಡಿಸಿ ಬುಧವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳು ತೀವ್ರ ಗದ್ದಲ ಉಂಟು ಮಾಡಿವೆ. ಇದರಿಂದ ಸಂಸತ್ತಿನ ಎರಡೂ ಸದನಗಳ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಗಿದೆ. ಲೋಕಸಭೆ ಸದಸ್ಯರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರೆ, ರಾಜ್ಯಸಭೆಯೊಳಗೂ ಪ್ರತಿಪಕ್ಷಗಳ ಸದಸ್ಯರು ಧ್ವನಿ ಎತ್ತಿದ್ದಾರೆ.
ದೇಶದಾದ್ಯಂತ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ ನಾಲ್ಕು ತಿಂಗಳ ಬಳಿಕ ತೈಲ ಬೆಲೆ ಏರಿಕೆಯಾಗುತ್ತಿದ್ದು, ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಕಾಂಗ್ರೆಸ್ ಲೋಕಸಭಾ ಸದಸ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ, ರಾಜ್ಯಸಭೆ ಒಳಗಡೆ ಕೂಡ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಟೀಕೆ ಮಾಡಿ, ಗದ್ದಲ ಉಂಟು ಮಾಡಿವೆ.
ಬೆಲೆ ಏರಿಕೆ ವಿರುದ್ಧ ನಾವು ಸದನದ ಹೊರಗೆ ಮತ್ತು ಸದನದ ಒಳಗೆ ಹೋರಾಟ ಮಾಡುತ್ತೇವೆ. ಬೆಲೆ ಏರಿಕೆ ಮೂಲಕವೇ ಸರ್ಕಾರ ಸುಮಾರು 10 ಸಾವಿರ ಕೋಟಿ ರೂ. ಲೂಟಿ ಮಾಡುತ್ತಿದೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಸರ್ಕಾರ ಸಬ್ಸಿಡಿ ನೀಡಬೇಕು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಯೋಗಿ ಆದಿತ್ಯನಾಥ್ಗೆ ನೋಟಿಸ್ ಜಾರಿ