ನವದೆಹಲಿ/ಬೆಂಗಳೂರು: ದೇಶದಲ್ಲಿ ಇಂಧನ ದರಗಳು ಪ್ರತಿದಿನವೂ ಪರಿಷ್ಕರಿಸಲ್ಪಡುತ್ತವೆ. ಬೆಳಗ್ಗೆ 06:00 ಗಂಟೆಗೆ ಹೊಸ ಬೆಲೆಗಳನ್ನು ನಾವು ಕಾಣುತ್ತಿದ್ದೇವೆ. ಇಂಧನದ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ.
ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆ ಸುಮಾರು ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಇವುಗಳಲ್ಲಿ ರೂಪಾಯಿ-ಡಾಲರ್ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ವಿದ್ಯಮಾನಗಳು, ಇಂಧನದ ಬೇಡಿಕೆ, ಇತ್ಯಾದಿ ಒಳಗೊಂಡಿರುತ್ತದೆ. ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಏರಿದಾಗ ಭಾರತದಲ್ಲಿಯೂ ತೈಲ ಬೆಲೆಗಳು ಹೆಚ್ಚಾಗುತ್ತವೆ. ಇಂದಿನ ಇಂಧನ ದರಗಳ ಬಗ್ಗೆ ತಿಳಿಯೋಣ..
ಇದನ್ನೂ ಓದಿ: ಮೇ 31ಕ್ಕೆ ಪೆಟ್ರೋಲ್ ಬಂಕ್ ಮಾಲೀಕರ ಪ್ರತಿಭಟನೆ: ತೈಲ ಖರೀದಿ ಸ್ಥಗಿತ
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ ಆಗಿದ್ದರೆ, ಡೀಸೆಲ್ ಬೆಲೆ 92.76 ರೂ ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಥಾಸ್ಥಿತಿಯಲ್ಲಿದೆ. ಪೆಟ್ರೋಲ್ ಲೀಟರ್‌ಗೆ 101.94 ರೂ. ಮಾರಾಟವಾಗುತ್ತಿದ್ದರೆ, ಡೀಸೆಲ್ ದರ 87.89ರೂ.ಗೆ ಮಾರಾಟವಾಗುತ್ತಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 101.65 ರೂಪಾಯಿ ಮತ್ತು ಡೀಸೆಲ್ ದರ ಒಂದು ಲೀಟರ್‌ಗೆ 87.65 ರೂಪಾಯಿ ಇದೆ. ಮಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 101.13 ರೂಪಾಯಿ ಇದ್ದು, ಲೀಟರ್ ಡೀಸೆಲ್‌ಗೆ 87.13 ರೂಪಾಯಿ ಇದೆ.
ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 101.44 ರೂಪಾಯಿ, ಡೀಸೆಲ್ ದರ ಒಂದು ಲೀಟರ್‌ಗೆ 87.43 ರೂಪಾಯಿ ಇದೆ. ಶಿವಮೊಗ್ಗದಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್‌ಗೆ 103.42 ರೂಪಾಯಿ ಇದ್ದು, ಲೀಟರ್ ಡೀಸೆಲ್‌ಗೆ 89.14 ರೂಪಾಯಿ ಇದೆ.