ETV Bharat / bharat

India's 77th Independence Day: ಕೆಂಪು ಕೋಟೆಯಲ್ಲಿ ಡ್ರೆಸ್ ರಿಹರ್ಸಲ್ ಆರಂಭ.. ರಾಜಧಾನಿಯಲ್ಲಿ ಬಿಗಿ ಭದ್ರತೆ - ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಎರಡು ದಿನಗಳು ಬಾಕಿ ಉಳಿದಿದ್ದು, ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ವಿವಿಧ ಸಶಸ್ತ್ರ ಪಡೆಗಳ ಸಂಪೂರ್ಣ ಉಡುಗೆ ಪೂರ್ವಾಭ್ಯಾಸ ನಡೆಯುತ್ತಿದೆ.

Dress rehearsal
ಡ್ರೆಸ್ ರಿಹರ್ಸಲ್
author img

By

Published : Aug 13, 2023, 10:02 AM IST

Updated : Aug 13, 2023, 10:08 AM IST

ನವದೆಹಲಿ: ಆ.15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ, ಭಾರತೀಯ ಸಶಸ್ತ್ರ ಪಡೆಗಳ ಡ್ರೆಸ್ ರಿಹರ್ಸಲ್ ಇಂದು ಇಲ್ಲಿನ ರಾಷ್ಟ್ರೀಯ ರಾಜಧಾನಿಯ ಕೆಂಪು ಕೋಟೆಯಲ್ಲಿ ಪ್ರಾರಂಭವಾಗಿದೆ. ಇಂದಿನ ಫುಲ್ ಡ್ರೆಸ್ ರಿಹರ್ಸಲ್‌(ಸಂಪೂರ್ಣ ಉಡುಗೆ ಪೂರ್ವಾಭ್ಯಾಸ)ನಲ್ಲಿ ಮಿಲಿಟರಿ ಬ್ಯಾಂಡ್, ನೌಕಾ ಮತ್ತು ವಾಯುಪಡೆಯ ಘಟಕಗಳು ಸೇರಿದಂತೆ ವಿವಿಧ ತುಕಡಿಗಳು ಭಾಗವಹಿಸಿದ್ದವು. 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಭದ್ರತೆ ಬಿಗಿಗೊಳಿಸಲಾಗಿದೆ.

ಭಾರತ ಮಂಗಳವಾರ ತನ್ನ 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಐತಿಹಾಸಿಕ ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಇತ್ತೀಚೆಗೆ ತಮ್ಮ ಮನ್ ಕಿ ಬಾತ್ ಪ್ರಸಾರದಲ್ಲಿ 'ಮೇರಿ ಮಟ್ಟಿ ಮೇರಾ ದೇಶ್​' (ನನ್ನ ಮಣ್ಣು, ನನ್ನ ದೇಶ) ಅಭಿಯಾನವನ್ನು ಘೋಷಿಸಿದರು. ಈ ಅಭಿಯಾನವು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಧೈರ್ಯಶಾಲಿಗಳನ್ನು ಗೌರವಿಸುವ ಉದ್ದೇಶವನ್ನು ಹೊಂದಿದೆ. ಇದರ ಅಡಿಯಲ್ಲಿ ನಮ್ಮ ಅಮರ ಹುತಾತ್ಮರ ಸ್ಮರಣಾರ್ಥ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಯೋಧರ ಸ್ಮರಣಾರ್ಥ ದೇಶಾದ್ಯಂತ ಲಕ್ಷಗಟ್ಟಲೆ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಾಸನಗಳನ್ನು ಅಳವಡಿಸಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆಗಳನ್ನು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ರಾಜ್ಯ ಸರ್ಕಾರಗಳು ಮತ್ತು ದೇಶಾದ್ಯಂತ ನಾಗರಿಕ ಸಮಾಜ ಸಂಸ್ಥೆಗಳು ಪ್ರಾರಂಭಿಸಿವೆ. 'ಮೇರಿ ಮಟ್ಟಿ ಮೇರಾ ದೇಶ್' ಅಭಿಯಾನದಡಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆಯೋಜಿಸಿದ 'ಹರ್ ಘರ್ ತಿರಂಗಾ' ರ‍್ಯಾಲಿಯಲ್ಲಿ ಶಾಲಾ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾಡುವ ಭಾಷಣವನ್ನು ಕೇಳಲು 1,800 ಕ್ಕೂ ಹೆಚ್ಚು ಜನರನ್ನು ಆಹ್ವಾನಿಸಲಾಗಿದೆ. ಇತರೆ ವಿಶೇಷ ಅತಿಥಿಗಳು ಮತ್ತು ಆಹ್ವಾನಿತರಲ್ಲಿ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು, ರೈತರು, ಸರಪಂಚರು, ಶಿಕ್ಷಕರು, ಮೀನುಗಾರರು ಹೀಗೆ ಸಮಾಜದ ವಿವಿಧ ಕ್ಷೇತ್ರಗಳ ಜನರು ಸೇರಲಿದ್ದಾರೆ.

ಪ್ರಧಾನಿಗೆ ಧನ್ಯವಾದ ಅರ್ಪಿಸಿದ ಜಾವೇದ್ ಮೊಹಮ್ಮದ್: ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಗೆ ಭಾರತದಾದ್ಯಂತದ 50 ಮಂದಿ ನರ್ಸಿಂಗ್ ಸಿಬ್ಬಂದಿಯನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಇಂತಹ ಕ್ಷಣಗಳು ಶುಶ್ರೂಷಕರನ್ನು ಪ್ರೇರೇಪಿಸುತ್ತವೆ ಮತ್ತು ಇದು ಶುಶ್ರೂಷೆಗೆ ನೀಡುತ್ತಿರುವ ಪ್ರಾಮುಖ್ಯತೆಯನ್ನು ತೋರಿಸುತ್ತದೆ ಎಂದು ನರ್ಸಿಂಗ್ ಸಿಬ್ಬಂದಿ ಜಾವೇದ್ ಮೊಹಮ್ಮದ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇದು ಎಲ್ಲಾ ಶುಶ್ರೂಷಾ ಅಧಿಕಾರಿಗಳಿಗೆ ಹೆಮ್ಮೆಯ ಕ್ಷಣವಾಗಿದೆ. ನಾನು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರು ಶುಶ್ರೂಷೆಯತ್ತ ಗಮನ ಹರಿಸಿದ್ದಾರೆ. ಭಾರತದಾದ್ಯಂತ ಸುಮಾರು 50 ನರ್ಸಿಂಗ್ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. ಅಂತಹ ಕ್ಷಣಗಳು ನಮ್ಮನ್ನು ಪ್ರೇರೇಪಿಸುತ್ತವೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ಆವರಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣವನ್ನು ಕೇಳಲು ಆಹ್ವಾನಿಸಲಾದ ಸುಮಾರು 1,800 ವ್ಯಕ್ತಿಗಳಲ್ಲಿ ಐವತ್ತು ದಾದಿಯರು ಮತ್ತು ಅವರ ಕುಟುಂಬಗಳು ಸೇರಿದ್ದಾರೆ. ಅವರಲ್ಲಿ ಮೂವರು ನರ್ಸ್‌ಗಳು ಹರಿಯಾಣ ರಾಜ್ಯದವರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪತ್ರಿಕಾ ಪ್ರಕಟಣೆ ಶನಿವಾರ ತಿಳಿಸಿದೆ.

ಹರಿಯಾಣದ ಫರಿದಾಬಾದ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫರಿದಾಬಾದ್‌ನ ಬಾದ್‌ಶಾಹ್ ಖಾನ್ ಸಿವಿಲ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್‌ನಲ್ಲಿ ನರ್ಸಿಂಗ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸವಿತಾ ರಾಣಿ ಅವರು ಈ ಉಪಕ್ರಮವನ್ನು ಶ್ಲಾಘಿಸಿದರು. ಕೋವಿಡ್ 19 ಬಿಕ್ಕಟ್ಟಿನ ಸಂದರ್ಭದಲ್ಲಿ ಅತ್ಯುತ್ತಮ ಕೆಲಸಕ್ಕಾಗಿ ಸವಿತಾ ರಾಣಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರ್ಸಿಂಗ್ ದಿನದಂದು ಗೌರವಿಸಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಆ.15, 2023 ರಂದು ಐತಿಹಾಸಿಕ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಗ್ರಾಮಗಳ ಸರಪಂಚರು, ಶಿಕ್ಷಕರು, ದಾದಿಯರು, ರೈತರು ಮತ್ತು ಮೀನುಗಾರರಿಂದ ಹಿಡಿದು ವಿವಿಧ ಕ್ಷೇತ್ರಗಳ ವಿಶೇಷ ಅತಿಥಿಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಎಲ್ಲಾ ವರ್ಗದ ಜನರನ್ನು ಆಹ್ವಾನಿಸಲು ಮತ್ತು ಆಚರಣೆಯ ಭಾಗವಾಗಲು ಉಪಕ್ರಮವನ್ನು ಸರ್ಕಾರ ತನ್ನ 'ಜನ ಭಾಗಿದರಿ'ಯ ದೃಷ್ಟಿಗೆ ಅನುಗುಣವಾಗಿ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ರಾಷ್ಟ್ರದ ಜನತೆಗೆ ಪ್ರಧಾನಿ ಕರೆ

Last Updated : Aug 13, 2023, 10:08 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.