ನವದೆಹಲಿ: ದೇಶದಲ್ಲಿ ಕೋವಿಡ್ ಸಾವು-ನೋವು ಹೆಚ್ಚುತ್ತಿದ್ದರೂ ಕಠಿಣ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಸೋಂಕು ಹರಡುವಿಕೆ ತಡೆಗಟ್ಟಲು ಇರುವುದು 'ಸಂಪೂರ್ಣ ಲಾಕ್‌ಡೌನ್' ಒಂದೇ ಮಾರ್ಗ ಎಂದು ಪ್ರತಿಪಾದಿಸಿದ್ದಾರೆ.
"ಭಾರತ ಸರ್ಕಾರದ ನಿಷ್ಕ್ರಿಯತೆಯು ಅನೇಕ ಮುಗ್ಧ ಜನರನ್ನು ಕೊಲ್ಲುತ್ತಿದೆ. ವೈರಸ್ ಹತ್ತಿಕ್ಕಲು ಇರುವ ಏಕೈಕ ಮಾರ್ಗವೆಂದರೆ ಅದರು ಸಂಪೂರ್ಣ ಲಾಕ್‌ಡೌನ್. ಇದು ಸರ್ಕಾರಕ್ಕೆ ಇನ್ನೂ ಅರ್ಥವಾಗುತ್ತಿಲ್ಲ. ದುರ್ಬಲ ವರ್ಗದ ಜನರಿಗೆ ನ್ಯಾಯ್ ಯೋಜನೆಯ ಭರವಸೆ ನೀಡಿ ಲಾಕ್‌ಡೌನ್ ಮಾಡಬೇಕು" ಎಂದು ಅವರು ಟ್ವೀಟ್ ಮಾಡಿದ್ದಾರೆ.
-
GOI doesn’t get it.
— Rahul Gandhi (@RahulGandhi) May 4, 2021 " class="align-text-top noRightClick twitterSection" data="
The only way to stop the spread of Corona now is a full lockdown- with the protection of NYAY for the vulnerable sections.
GOI’s inaction is killing many innocent people.
">GOI doesn’t get it.
— Rahul Gandhi (@RahulGandhi) May 4, 2021
The only way to stop the spread of Corona now is a full lockdown- with the protection of NYAY for the vulnerable sections.
GOI’s inaction is killing many innocent people.GOI doesn’t get it.
— Rahul Gandhi (@RahulGandhi) May 4, 2021
The only way to stop the spread of Corona now is a full lockdown- with the protection of NYAY for the vulnerable sections.
GOI’s inaction is killing many innocent people.
ಕಳೆದ ತಿಂಗಳು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರಗಳು ಲಾಕ್‌ಡೌನ್ ಅನ್ನು ಕೊನೆಯ ಆಯ್ಕೆಯಾಗಿ ಮಾತ್ರ ಬಳಸಬೇಕು ಎಂದು ಹೇಳಿದ್ದರು. ಆದರೆ ಪ್ರತಿನಿತ್ಯ ಮೂರು ಲಕ್ಷಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಮೂರು ಸಾವಿರಕ್ಕೂ ಹೆಚ್ಚು ಮಂದಿ ವೈರಸ್ನಿಂದ ಪ್ರಾಣ ಬಿಡುತ್ತಿದ್ದಾರೆ. ಹೀಗಾಗಿ ಕೋವಿಡ್ ಹರಡುವಿಕೆ ಸರಪಳಿಯನ್ನು ಪರಿಣಾಮಕಾರಿಯಾಗಿ ಮುರಿಯಲು ಹಂತ ಹಂತವಾಗಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನಿವಾರ್ಯವಾಗಿದ್ದು, ಸದ್ಯಕ್ಕೆ ಕನಿಷ್ಠ ಎರಡು ವಾರಗಳ ಕಾಲ ಲಾಕ್‌ಡೌನ್ ವಿಧಿಸುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸೇರಿದಂತೆ ದೇಶದ ಆರೋಗ್ಯ ರಕ್ಷಣಾ ಸಂಸ್ಥೆಗಳು ಪ್ರಧಾನಿ ನರೇಂದ್ರ ಮೋದಿಗೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ 2 ಕೋಟಿ ಗಡಿ ದಾಟಿದ ಕೋವಿಡ್ ಕೇಸ್.. ಒಂದೇ ದಿನ 3,449 ಮಂದಿ ಬಲಿ
ಏನಿದು ನ್ಯಾಯ್ (NYAY) ಯೋಜನೆ?
ನ್ಯಾಯ್, ಇದು ದೇಶದ ದುರ್ಬಲ ವರ್ಗದ ಜನರಿಗೆ ಆರ್ಥಿಕ ಸಹಾಯ ಒದಗಿಸುವ, ಕನಿಷ್ಠ ಬೆಂಬಲ ನೀಡುವ ಯೋಜನೆಯಾಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಈ ಯೋಜನೆ ಜಾರಿಗೊಳಿಸುವುದಾಗಿ ಭರವಸೆ ನೀಡಿದೆ. ಈ ಯೋಜನೆಯಡಿ ಸುಮಾರು 5 ಕೋಟಿ ಭಾರತೀಯ ಕುಟುಂಬಗಳ ಖಾತೆಗೆ ನೇರವಾಗಿ ವಾರ್ಷಿಕ 72,000 ರೂ. ಅಥವಾ ತಿಂಗಳಿಗೆ 6,000 ರೂ. ಹಣ ಜಮೆ ಮಾಡಲಾಗುವುದು.