ETV Bharat / bharat

ಮಹಾರಾಷ್ಟ್ರದ ಸ್ಟೀಲ್​ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ - ಕುಲುಮೆ ಸ್ಫೋಟ

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಸ್ಟೀಲ್​ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

furnace-blast-at-steel-company-in-jalna-maharashtra
ಮಹಾರಾಷ್ಟ್ರದ ಸ್ಟೀಲ್​ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ
author img

By

Published : Nov 1, 2022, 2:55 PM IST

Updated : Nov 1, 2022, 4:18 PM IST

ಜಲ್ನಾ (ಮಹಾರಾಷ್ಟ್ರ): ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಭಾರಿ ಅವಘಡ ಸಂಭವಿಸಿದ್ದು, ಸ್ಟೀಲ್​ ಕಾರ್ಖಾನೆಯೊಂದರಲ್ಲಿ ಕುಲುಮೆ ಸ್ಫೋಟಗೊಂಡಿದೆ. ಇದರಿಂದ ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಜೊತೆಗೆ ಇತರ ಆರು ಜನರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಸ್ಟೀಲ್​ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ

ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಗೀತೈ ಸ್ಟೀಲ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಜರುಗಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲದೇ, ಈ ಸ್ಫೋಟದಲ್ಲಿ ಪಕ್ಕದಲ್ಲೇ ನಿಂತಿದ್ದ ಟ್ರಕ್​ ಕೂಡ ಸುಟ್ಟು ಹೋಗಿದೆ. ಈ ಘಟನೆಯ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಈ ದುರಂತದ ನಿಖರ ಪತ್ತೆ ಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ರೈಲು ಶೌಚಾಲಯದಲ್ಲಿ ಕೊಳೆತ ಶವ ಪತ್ತೆ!

Last Updated : Nov 1, 2022, 4:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.