ನವದೆಹಲಿ : ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ಇಂದು ನಡೆಯಲಿರುವ ಜಿ20 ಶೃಂಗಸಭೆಗೂ ಮುನ್ನ ನಿನ್ನೆ(ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಈ ಕುರಿತು ಎಕ್ಸ್ ಆ್ಯಪ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯವು, ನರೇಂದ್ರ ಮೋದಿ ಮತ್ತು ಜೋ ಬೈಡನ್ ಅವರು ದೆಹಲಿಯ 7, ಲೋಕ ಕಲ್ಯಾಣ್ ಮಾರ್ಗ್ದಲ್ಲಿನ ನಿವಾಸದಲ್ಲಿ ಮಾತುಕತೆ ನಡೆಸಿದರು. ಅವರ ಚರ್ಚೆಯು ಭಾರತ ಮತ್ತು ಅಮೆರಿಕದ ನಡುವೆ ಬಾಂಧವ್ಯ ವೃದ್ಧಿ ಕುರಿತಾದ ಅಂಶಗಳನ್ನು ಒಳಗೊಂಡಿತ್ತು’ ಎಂದು ತಿಳಿಸಿದೆ.
ದ್ವಿಪಕ್ಷೀಯ ಮಾತುಕತೆ ವೇಳೆ ಅಮೆರಿಕದ ಖಜಾನೆ ಕಾರ್ಯದರ್ಶಿ ಜಾನೆಟ್ ಯೆಲೆನ್, ವಿದೇಶಾಂಗ ಕಾರ್ಯದರ್ಶಿ ಆಂಥೋನಿ ಬ್ಲಿಂಕೆನ್ ಮತ್ತು ಯುಎಸ್ ಎನ್ಎಸ್ಎ ಜೇಕ್ ಸುಲ್ಲಿವಾನ್ ಅವರು ಉಪಸ್ಥಿತರಿದ್ದರು. ಭಾರತದ ವಿದೇಶಾಂಗ ಸಚಿವ ಎಸ್ ಜೈ ಶಂಕರ್, ಎನ್‌ಎಸ್‌ಎ ಅಜಿತ್ ದೋವಲ್ ಸಹ ಭಾರತದ ಪರವಾಗಿ ಹಾಜರಿದ್ದರು.
ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, "ಅಮೆರಿಕ ಅಧ್ಯಕ್ಷ ಬೈಡನ್ ಅವರೊಂದಿಗಿನ ಮಾತುಕತೆಯು 'ಅತ್ಯಂತ ಫಲಪ್ರದವಾಗಿದೆ' (very productive), ಭಾರತ ಮತ್ತು ಯುಎಸ್ ನಡುವೆ ಮತ್ತಷ್ಟು ಬಾಂಧವ್ಯ ವೃದ್ಧಿಸಲು ಆರ್ಥಿಕ, ಸಾರ್ವಜನಿಕ ಸಂಪರ್ಕ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಗಿದೆ. ಭಾರತ ಮತ್ತು ಯುಎಸ್ ನಡುವಿನ ಸ್ನೇಹವು ಜಾಗತಿಕ ಒಳಿತನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ" ಎಂದು ಹೇಳಿದರು.
-
Happy to have welcomed @POTUS @JoeBiden to 7, Lok Kalyan Marg. Our meeting was very productive. We were able to discuss numerous topics which will further economic and people-to-people linkages between India and USA. The friendship between our nations will continue to play a… pic.twitter.com/Yg1tz9kGwQ
— Narendra Modi (@narendramodi) September 8, 2023 " class="align-text-top noRightClick twitterSection" data="
">Happy to have welcomed @POTUS @JoeBiden to 7, Lok Kalyan Marg. Our meeting was very productive. We were able to discuss numerous topics which will further economic and people-to-people linkages between India and USA. The friendship between our nations will continue to play a… pic.twitter.com/Yg1tz9kGwQ
— Narendra Modi (@narendramodi) September 8, 2023Happy to have welcomed @POTUS @JoeBiden to 7, Lok Kalyan Marg. Our meeting was very productive. We were able to discuss numerous topics which will further economic and people-to-people linkages between India and USA. The friendship between our nations will continue to play a… pic.twitter.com/Yg1tz9kGwQ
— Narendra Modi (@narendramodi) September 8, 2023
ಶ್ವೇತಭವನವು ಪಿಎಂ ಮೋದಿ ಮತ್ತು ಬೈಡನ್ ಪರವಾಗಿ ಜಂಟಿ ಹೇಳಿಕೆ ನೀಡಿದೆ. ಮಾತುಕತೆಯ ಸಂದರ್ಭದಲ್ಲಿ, ಉಭಯ ದೇಶಗಳ ನಾಯಕರು ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಮಾನವ ಹಕ್ಕುಗಳು, ಒಳಗೊಳ್ಳುವಿಕೆ, ಬಹುತ್ವ ಸೇರಿದಂತೆ ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳ ಹಂಚಿಕೆಯ ಮೌಲ್ಯಗಳು ಎರಡೂ ದೇಶಗಳ ಯಶಸ್ಸಿಗೆ ಪ್ರಮುಖ ಕಾರಣವಾಗಿವೆ. ಅಮೆರಿಕದ ಅಧ್ಯಕ್ಷರು ಭಾರತದ G20 ಅಧ್ಯಕ್ಷ ಸ್ಥಾನವನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಜೋ ಬೈಡನ್ ಅವರು ಮುಕ್ತ, ಅಂತರ್ಗತ ಮತ್ತು ಚೇತರಿಸಿಕೊಳ್ಳುವ ಇಂಡೋ-ಪೆಸಿಫಿಕ್ ವಿಷಯವನ್ನು ಬೆಂಬಲಿಸುವಲ್ಲಿ ಕ್ವಾಡ್‌ನ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದರು ಎಂದು ತಿಳಿಸಿದೆ.
ಬಳಿಕ, ಉಭಯ ನಾಯಕರ ನಡುವಿನ ದ್ವಿಪಕ್ಷೀಯ ಮಾತುಕತೆಯ ನಂತರ ಬಿಡುಗಡೆಯಾದ ಜಂಟಿ ಹೇಳಿಕೆಯಲ್ಲಿ, "2024 ರಲ್ಲಿ ಭಾರತವು ಆತಿಥ್ಯ ವಹಿಸಲಿರುವ ಮುಂದಿನ ಕ್ವಾಡ್ ನಾಯಕರ ಶೃಂಗಸಭೆಗೆ ಯುಎಸ್ ಅಧ್ಯಕ್ಷರನ್ನು ಸ್ವಾಗತಿಸಲು ಪ್ರಧಾನಿ ಎದುರು ನೋಡುತ್ತಿದ್ದಾರೆ. ಮೋದಿ ಮತ್ತು ಬೈಡನ್ ಅವರು ಮುಕ್ತ, ಅಂತರ್ಗತ ಇಂಡೋ-ಪೆಸಿಫಿಕ್ ಅನ್ನು ಬೆಂಬಲಿಸುವಲ್ಲಿ ಕ್ವಾಡ್‌ನ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದ್ದಾರೆ. ಕಳೆದ ಜೂನ್ 2023 ರಲ್ಲಿ IPO ಗೆ ಸೇರುವ ಅಮೆರಿಕ ನಿರ್ಧಾರದ ಜೊತೆಗೆ ವ್ಯಾಪಾರ, ಸಂಪರ್ಕ ಮತ್ತು ಕಡಲ ಸಾರಿಗೆಯ ಮೇಲಿನ ಇಂಡೋ-ಪೆಸಿಫಿಕ್ ಓಷನ್ ಇನಿಶಿಯೇಟಿವ್ ಪಿಲ್ಲರ್ ಅನ್ನು ಸಹ ನೇತೃತ್ವ ವಹಿಸುವ ಅಮೆರಿಕದ ನಿರ್ಧಾರವನ್ನು ಭಾರತ ಸ್ವಾಗತಿಸಿದೆ ಎಂದು ತಿಳಿಸಿದೆ. ಜೊತೆಗೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕಾಗಿ ಅಧ್ಯಕ್ಷ ಬೈಡನ್ ಅವರು ಭಾರತವನ್ನು ಬೆಂಬಲಿಸಿದ್ದಾರೆ.
ಇದನ್ನೂ ಓದಿ : G-20 Summit: ದೆಹಲಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಗಮನ... ಪ್ರಧಾನಿ ಜತೆ ಮಹತ್ವದ ಮಾತುಕತೆ