ETV Bharat / bharat

ಬಾಲಿಯಲ್ಲಿ ಜಿ20 ಶೃಂಗಸಭೆ: 45 ಗಂಟೆ, 20 ಸಭೆಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ - ಇಂಡೊನೇಷ್ಯಾದ ಬಾಲಿ

ಪ್ರಧಾನಿ ನರೇಂದ್ರ ಮೋದಿ ಜಿ20 ಶೃಂಗಸಭೆಗಾಗಿ ಇಂದು (ಸೋಮವಾರ) ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ. ಇಲ್ಲಿ 45 ಗಂಟೆ ಕಳೆಯಲಿರುವ ಪ್ರಧಾನಿ 10 ವಿಶ್ವ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ. ನ.16ರಂದು ಅವರು ಸ್ವದೇಶಕ್ಕೆ ವಾಪಸ್‌ ಆಗುವರು.

PM Modi
ನರೇಂದ್ರ ಮೋದಿ
author img

By

Published : Nov 14, 2022, 7:21 AM IST

ನವದೆಹಲಿ: ಇಂಡೋನೇಷ್ಯಾದ ಪ್ರಮುಖ ಪ್ರಾಂತ್ಯವಾದ ಬಾಲಿಯಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಸೋಮವಾರ ಅಲ್ಲಿಗೆ ತೆರಳಲಿರುವ ಅವರು ಸುಮಾರು 10 ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಇದರ ಜತೆಗೆ ಇಂಡೋನೇಷ್ಯಾದಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂಪರ್ಕ ಸಾಧಿಸಲು ಸಮುದಾಯ ಕಾರ್ಯಕ್ರಮವೊಂದರಲ್ಲಿ ಮಾತನಾಡಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ತಿಳಿಸಿದ್ದಾರೆ.

ಶೃಂಗಸಭೆಯಲ್ಲಿ ಉಕ್ರೇನ್‌ ಯುದ್ಧ ಮತ್ತು ಅದರ ಪರಿಣಾಮಗಳೂ ಸೇರಿದಂತೆ ಜಾಗತಿಕ ಮಟ್ಟದ ವಿವಿಧ ಸವಾಲುಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಜಾಗತಿಕ ಆರ್ಥಿಕತೆ, ಆಹಾರ ಮತ್ತು ಇಂಧನ ಭದ್ರತೆ, ಡಿಜಿಟಲ್‌ ರೂಪಾಂತರ ಮತ್ತು ಪರಿಸರ ಮೊದಲಾದ ವಿಚಾರಗಳ ಬಗ್ಗೆ ಮೋದಿ ಇತರ ನಾಯಕರ ಜೊತೆ ಮಾತುಕತೆ ನಡೆಸುವರು ಎಂದು ವಿನಯ್ ಕ್ವಾತ್ರಾ ಮಾಹಿತಿ ನೀಡಿದರು.

ಇಂಡೊನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ ಅವರ ಆಹ್ವಾನದ ಮೇರೆಗೆ ಮೋದಿ ಅವರು ಈ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಬಾಲಿಯಲ್ಲಿ 45 ಗಂಟೆಗಳ ವಾಸ್ತವ್ಯದ ಅವಧಿಯಲ್ಲಿ ಅವರು 20 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಡಿ.1 ರಿಂದ ಔಪಚಾರಿಕವಾಗಿ ಜಿ 20 ಅಧ್ಯಕ್ಷ ಸ್ಥಾನವನ್ನು ಭಾರತ ವಹಿಸಿಕೊಳ್ಳಲಿದೆ.

ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌, ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್‌, ಜರ್ಮನಿಯ ಚಾನ್ಸೆಲರ್‌ ಒಲಾಫ್ ಸ್ಕಾಲ್ಜ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಜಿ20 ನಾಯಕರ ಶೃಂಗಸಭೆ: ರೋಮ್​​ಗೆ ಬಂದಿಳಿದ ಪ್ರಧಾನಿ ಮೋದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.