ETV Bharat / bharat

ಕೋವಿಡ್ ಔಷಧಗಳ ಅಕ್ರಮ ದಾಸ್ತಾನು: ‘ಗಂಭೀರ್’ ತಪ್ಪು ಸಾಬೀತು!

ಈ ಸಂಬಂಧ ಕೋರ್ಟ್​​ಗೆ ವರದಿ ನೀಡಿದ ದೆಹಲಿಯ ಔಷಧ ನಿಯಂತ್ರಕ ಇಲಾಖೆ, ಗೌತಮ್ ಗಂಭೀರ್ ಫೌಂಡೇಷನ್ ಅಕ್ರಮವಾಗಿ ಕೋವಿಡ್ ಔಷಧಗಳನ್ನು ಸಂಗ್ರಹಿಸಿ ವಿತರಣೆ ಮಾಡಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೇವೆ. ಅಲ್ಲದೆ ಇಂತಹ ಪ್ರಕರಣಗಳು ಕಂಡು ಬಂದರೆ ಮಾಹಿತಿ ನೀಡುವಂತೆ ಔಷಧ ಡೀಲರ್​​ಗಳಿಗೆ ಸೂಚಿಸಲಾಗಿದೆ ಎಂದು ಹೇಳಿದೆ.

ಗಂಭೀರ್
ಗಂಭೀರ್
author img

By

Published : Jun 3, 2021, 5:32 PM IST

ನವದೆಹಲಿ: ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲಾಗುವ ಅತ್ಯಾವಶ್ಯಕ ಔಷಧಗಳ ಅನಧಿಕೃತ ದಾಸ್ತಾನು, ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ಗಂಭೀರ್ ಫೌಂಡೇಷನ್​​ನ ಅಪರಾಧ ಸಾಬೀತಾಗಿದೆ ಎಂದು ದೆಹಲಿ ಹೈಕೋರ್ಟ್​​ಗೆ ದೆಹಲಿ ಸರ್ಕಾರದ ಔಷಧ ನಿಯಂತ್ರಕ ಹೇಳಿದೆ.

ಕೋವಿಡ್ ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿದ್ದ ಅತ್ಯಾವಶ್ಯಕ ಫ್ಯಾಬಿ ಫ್ಲೂ ಮಾತ್ರೆಗಳನ್ನು ಗೌತಮ್ ಗಂಭೀರ್ ಫೌಂಡೇಷನ್ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿ ವಿತರಣೆ ಮಾಡಿತ್ತು. ಈ ಬಗ್ಗೆ ಗಮನ ಹರಿಸಿದ್ದ ದೆಹಲಿ ಹೈಕೋರ್ಟ್, ದೇಶಾದ್ಯಂತ ಔಷಧಗಳ ವ್ಯಾಪಕ ಕೊರತೆ ಇರುವ ಪರಿಸ್ಥಿತಿಯಲ್ಲಿ ಗೌತಮ್ ಗಂಭೀರ್ ಫೌಂಡೇಷನ್ ಸಂಸ್ಥೆ ಯಥೇಚ್ಛವಾಗಿ ಈ ಔಷಧಗಳನ್ನು ಸಂಗ್ರಹಿಸಿದ್ದು ಹೇಗೆ..? ಇದಕ್ಕೆ ಯಾವ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ಔಷಧ ನಿಯಂತ್ರಕರನ್ನು ಪ್ರಶ್ನಿಸಿತ್ತು. ಅಲ್ಲದೆ, ನಿಮ್ಮಿಂದ ಸರಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದಿದ್ದರೆ, ನಮಗೆ ಹೇಳಿ. ಬೇರೆಯವರನ್ನು ನೇಮಿಸುತ್ತೇವೆ ಎಂದು ಎಚ್ಚರಿಕೆ ನೀಡಿತ್ತು.

ಈ ಸಂಬಂಧ ಕೋರ್ಟ್​​ಗೆ ವರದಿ ನೀಡಿದ ದೆಹಲಿಯ ಔಷಧ ನಿಯಂತ್ರಕ ಇಲಾಖೆ, ಗೌತಮ್ ಗಂಭೀರ್ ಫೌಂಡೇಷನ್ ಅಕ್ರಮವಾಗಿ ಕೋವಿಡ್ ಔಷಧಗಳನ್ನು ಸಂಗ್ರಹಿಸಿ ವಿತರಣೆ ಮಾಡಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೇವೆ. ಅಲ್ಲದೆ ಇಂತಹ ಪ್ರಕರಣಗಳು ಕಂಡು ಬಂದರೆ ಮಾಹಿತಿ ನೀಡುವಂತೆ ಔಷಧ ಡೀಲರ್​​ಗಳಿಗೆ ಸೂಚಿಸಲಾಗಿದೆ ಎಂದು ಹೇಳಿದೆ.

ಇದೇ ಪ್ರಕರಣದಲ್ಲಿ ಶಾಸಕ ಪ್ರವೀಣ್ ಕುಮಾರ್ ಅವರನ್ನೂ ಔಷಧ ಮತ್ತು ಸೌಂದರ್ಯ ವರ್ಧಕ (ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್) ಕಾಯ್ದೆಯಡಿ ತಪ್ಪಿತಸ್ಥರು ಎಂದು ಹೇಳಿದೆ.

ಆರು ವಾರಗಳಲ್ಲಿ ಈ ಪ್ರಕರಣಗಳಲ್ಲಿ ಹೆಚ್ಚಿನ ಪ್ರಗತಿಯ ಕುರಿತು ಸ್ಥಿತಿ ವರದಿಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಔಷಧ ನಿಯಂತ್ರಕ ಪ್ರಾಧಿಕಾರವನ್ನು ಕೇಳಿದೆ. ಅಲ್ಲದೆ ಜುಲೈ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.