ಬಾರ್ಮರ್: ಲಿಫ್ಟ್ ನೀಡುವ ನೆಪದಲ್ಲಿ ಮಹಿಳೆವೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂವರು ಪುರುಷರು ಲಿಫ್ಟ್ ನೀಡುವ ನೆಪದಲ್ಲಿ ಮಹಿಳೆಯನ್ನು ಬಲದೇವ್ ನಗರದ ನಿರ್ಜನ ಪ್ರದೇಶದಲ್ಲಿರುವ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಿಳೆ ತನ್ನ ಮಗುವಿನೊಂದಿಗೆ ಹಳ್ಳಿಗೆ ಹೊರಟಿದ್ದ ವೇಳೆ ಅಪರಿಚಿತರು ಬಂದು ಲಿಫ್ಟ್ ನೀಡುವುದಾಗಿ ಹೇಳಿದ್ದಾರೆ. ಬಳಿಕ ನಗರದ ನಿರ್ಜನ ಪ್ರದೇಶದಲ್ಲಿರುವ ಮನೆಗೆ ಕರೆದೊಯ್ಯಲಾಗಿದೆ. 3 ಜನರು ಮಗುವಿನ ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.
ಈ ಕುರಿತು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.