ETV Bharat / bharat

ಉತ್ತರಪ್ರದೇಶದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ಕೊಲೆ? - ಯುವತಿ ರೇಪ್​ ಅಂಡ್​ ಮರ್ಡ್​ರ್​

ಉತ್ತರಪ್ರದೇಶದ ಬಸ್ತಿಯಲ್ಲಿ ಯುವತಿಯ ಮೇಲೆ ರೇಪ್​ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಲಾಗಿದೆ.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
author img

By

Published : Jun 8, 2023, 9:34 AM IST

ಬಸ್ತಿ(ಉತ್ತರಪ್ರದೇಶ): ಉತ್ತರಪ್ರದೇಶದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ, ಕೊಲೆ ಘಟನೆ ನಡೆದಿರುವ ಬಗ್ಗೆ ಶಂಕೆ ಮೂಡಿದೆ. ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿದ ಬಳಿಕ ಯುವಕರ ಗುಂಪು ಅವಳನ್ನು ಕೊಂದು ಹಾಕಿದ್ದಾರೆ. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಉಳಿದಿವರಿಗಾಗಿ ತಲಾಶ್​ ನಡೆದಿದೆ.

ಇಲ್ಲಿನ ಗೌರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್​ 5 ರಂದು(ಸೋಮವಾರ) ರಾತ್ರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಇದಾದ ನಂತರ ಯುವತಿಯ ಮೃತದೇಹ ರಾತ್ರಿ 10 ಗಂಟೆ ಪತ್ತೆಯಾಗಿದೆ. ಪ್ರಕರಣದಲ್ಲಿ ಓರ್ವನನ್ನು ಮಾತ್ರ ಬಂಧಿಸಲಾಗಿದೆ, ಉಳಿದವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಯುವತಿಯ ಕುಟುಂಬಸ್ಥರು ರಸ್ತೆ ತಡೆ ನಡೆಸಿದ ಪ್ರತಿಭಟನೆ ನಡೆಸಿದರು.

ಘಟನೆಯ ವಿವರ: ಆರೋಪಿ ಮೋನು ಸಾಹ್ನಿ ಕಳೆದ ಏಳು ತಿಂಗಳಿಂದ ಯುವತಿಯೊಂದಿಗೆ ಸಂಪರ್ಕದಲ್ಲಿದ್ದ. ಜೂನ್​ 5 ರಂದು ಸಂಜೆ ಯುವತಿಯನ್ನು ದೊಡ್ಡ ಕಟ್ಟಡದೊಳಕ್ಕೆ ಕರೆದುಕೊಂಡು ಹೋಗಿದ್ದ. ಇಬ್ಬರ ನಡುವೆ ಯಾವುದೋ ಕಾರಣಕ್ಕಾಗಿ ವಾಗ್ವಾದ ನಡೆದಿದೆ. ಈ ವೇಳೆ ಆರೋಪಿ ತನ್ನ ಸ್ನೇಹಿತರೊಂದಿಗೆ ಸೇರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಯುವತಿ ತೀವ್ರ ರಕ್ತಸ್ರಾವಕ್ಕೀಡಾಗಿದ್ದಾಳೆ. ಅಷ್ಟಕ್ಕೇ ಬಿಡದ ಆರೋಪಿಗಳು ಮೂರ್ಛೆ ಬಿದ್ದಿದ್ದ ಯುವತಿಯನ್ನು ಮಹಡಿ ಮೇಲಿನ ಮೆಟ್ಟಿಲುಗಳಿಂದ ಎಳೆದು ತಂದು ರಸ್ತೆಬದಿ ಎಸೆದಿದ್ದಾರೆ.

ತೀವ್ರ ರಕ್ತಸ್ರಾವದಿಂದಾಗಿ ಯುವತಿ ಅಲ್ಲಿಯೇ ಸಾವಿಗೀಡಾಗಿದ್ದಾಳೆ ಎನ್ನಲಾಗಿದೆ. ಮನೆಯಲ್ಲಿ ಯುವತಿ ನಾಪತ್ತೆಯಾಗಿದ್ದು ಕುಟುಂಬಸ್ಥರು ಹುಡುಕಾಡಿದ್ದಾರೆ. ದೊಡ್ಡ ಕಟ್ಟಡದ ರಸ್ತೆಯ ಬಳಿ ಯುವತಿಯ ಮೃತದೇಹ ಪತ್ತೆಯಾಗಿದೆ. ಬಳಿಕ ಇದು ಕೊಲೆ ಎಂದು ಶಂಕಿಸಿರುವ ಪೋಷಕರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಅನುಮಾನದ ಮೇರೆಗೆ ಓರ್ವನನ್ನು ಬಂಧಿಸಿದ್ದಾರೆ. 24 ಗಂಟೆಗಳಿಂದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧಿಸದ ಕಾರಣ ಆಕ್ರೋಶಗೊಂಡ ಸಂಬಂಧಿಕರು ರಸ್ತೆ ತಡೆ ನಡೆಸಿದರು.

ಮೋನು ಸಾಹ್ನಿ, ರಾಜ್ ನಿಶಾದ್ ಮತ್ತು ಕುಂದನ್ ಸಿಂಗ್ ಎಂಬ ಮೂವರು ಯುವಕರ ವಿರುದ್ಧ ಮೃತ ಯುವತಿಯ ಕುಟುಂಬಸ್ಥರು ಗೌರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಈ ಮೂವರು ಆರೋಪಿಗಳು ರಾಜಕೀಯ ಪಕ್ಷದ ಜತೆ ನಂಟು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಅತಿಯಾದ ರಕ್ತಸ್ರಾವ ಮತ್ತು ನರರೋಗದಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ಚುರುಕುಗೊಳಿಸಿದ್ದಾರೆ. ಬಂಧಿತ ಆರೋಪಿ ನೀಡಿದ ಮಾಹಿತಿಯ ಮೇರೆಗೆ, ದೊಡ್ಡ ಕಟ್ಟಡವನ್ನು ಜಾಲಾಡಿದಾಗ ಹಾಸಿಗೆಯ ಮೇಲೆ ರಕ್ತದ ಕಲೆಗಳು ಗೋಚರವಾಗಿವೆ. ಇದೇ ಜಾಡು ಹಿಡಿದು ಪೊಲೀಸರು ಘಟನೆಗೆ ಸಂಬಂಧಿಸಿದ ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶೀಘ್ರವೇ ಎಲ್ಲ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ ವಿಮಾನದಲ್ಲಿ 50 ಕ್ಕಿಂತ ಕಡಿಮೆ ಅಮೆರಿಕ ನಾಗರಿಕ ಪ್ರಯಾಣಿಕರಿದ್ದರು: ವಿದೇಶಾಂಗ ಇಲಾಖೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.