ಅಯೋಧ್ಯೆ(ಉತ್ತರ ಪ್ರದೇಶ): ಶಾಪಿಂಗ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ಸಹೋದರಿಯರನ್ನು ಅಪಹರಿಸಿದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಅಯೋಧ್ಯೆಯ ಗ್ರಾಮಾಂತರ ಪ್ರದೇಶ ಬಿಕಾಪುರ್ ಕೊತ್ವಾಲಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿಯರ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಯುವತಿಯರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ. ಆರೋಪಿಗಳಿಗೆ ಪೊಲೀಸರಿಂದ ಶೋಧ ನಡೆಯುತ್ತಿದೆ.
ಸಾಮೂಹಿಕ ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು ಕೊಲೆ ಬೆದರಿಕೆ ಕೂಡಾ ಹಾಕಿದ್ದಾರೆ. ಸಂತ್ರಸ್ತೆಯರು ಬುಡಕಟ್ಟು ಜನಾಂಗಕ್ಕೆ ಸೇರಿದವರೆಂದು ತಿಳಿದು ಬಂದಿದೆ. ಇಬ್ಬರು ಸೋಮವಾರ ಸಂಜೆ ಶೇರ್ಪುರ್ ಪ್ಯಾರಾ ಬಜಾರ್ಗೆ ತೆರಳಿದ್ದು, ವಾಪಸ್ ಮನೆಗೆ ಬರುತ್ತಿದ್ದಾಗ ನಾಲ್ವರು ಯುವಕರು ಇವರಿಗೆ ತಡೆಯೊಡ್ಡಿ ದುಷ್ಕೃತ್ಯ ಎಸಗಿದ್ದಾರೆ.
ಇದನ್ನೂ ಓದಿ: ಪ್ರೀತಿಸಲು ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಕಿರಾತಕ
ಬಹಳ ಹೊತ್ತಾದರೂ ಯುವತಿಯರು ಮನೆಗೆ ಬಾರದ ಕಾರಣ ಪೋಷಕರು ಹುಡುಕಾಟ ಆರಂಭಿಸಿದ್ದರು. ಆ ಬಳಿಕ ಊರ ಹೊರಗಡೆ ಕಾಣಿಸಿಕೊಂಡಿದ್ದು, ವಿಚಾರಣೆ ನಡೆಸಿದಾಗ ಅವರು ಘಟನೆಯನ್ನು ವಿವರಿಸಿದ್ದಾರೆ.