ETV Bharat / bharat

ಯುಪಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ - ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ - ಇಬ್ಬರ ಬಂಧನ

gangrape-with-women-in-banda-put-glass-bottle-in-private-part
ಯುಪಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : ಖಾಸಗಿ ಅಂಗಕ್ಕೆ ಬಾಟಲಿ ಹಾಕಿ ಕ್ರೌರ್ಯ
author img

By

Published : Jan 15, 2023, 7:12 PM IST

ಬಾಂದಾ (ಉತ್ತರಪ್ರದೇಶ): ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕ್ರೌರ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ದೇಹಾತ್ ಕೊತ್ವಾಲಿ ಪ್ರದೇಶದಲ್ಲಿ ಮಹಿಳೆ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿರುವುದಲ್ಲದೆ ಮತ್ತೋರ್ವ ವ್ಯಕ್ತಿ ಮಹಿಳೆಯ ಖಾಸಗಿ ಅಂಗಕ್ಕೆ ಗಾಜಿನ ಬಾಟಲಿಯನ್ನು ಹಾಕಿ ಕ್ರೌರ್ಯ ಎಸಗಿದ್ದಾನೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಶನಿವಾರ ತಡರಾತ್ರಿ ಮಹಿಳೆಯೊಬ್ಬರು ತನ್ನ ಪತಿಯೊಂದಿಗೆ ಬಾಂದ್ರಾಗೆ ತೆರಳುತ್ತಿದ್ದರು. ಈ ವೇಳೆ ಮಹಿಳೆಯ ಪತಿಯೊಂದಿಗೆ ಇತರೆ ಮೂರು ಜನ ಇನ್ನೊಂದು ಬೈಕ್​ನಲ್ಲಿ ಬರುತ್ತಿದ್ದರು. ದಾರಿ ಮಧ್ಯೆ ಈ ಮೂವರು ಮತ್ತು ದಂಪತಿ ಮದ್ಯಪಾನ ಮಾಡಿದ್ದಾರೆ. ಮದ್ಯ ಸೇವಿಸಿದ ಬಳಿಕ ಮಹಿಳೆಯ ಪತಿ ಹಾಗೂ ಮಹಿಳೆ ನಶೆಯಲ್ಲಿದ್ದರು. ಈ ವೇಳೆ ಮಹಿಳೆಯ ಪತಿಯನ್ನು ಸಿಗರೇಟ್ ಖರೀದಿಸಲು ಕಳುಹಿಸಿದ್ದಾರೆ. ಬಳಿಕ ನಶೆಯಲ್ಲಿದ್ದ ಮಹಿಳೆ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ.

ಮಹಿಳೆ ಮೇಲೆ ಕ್ರೌರ್ಯ: ತಡರಾತ್ರಿ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರು ಅರಚಾಡುತ್ತಿರುವ ಶಬ್ದವನ್ನು ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮಹಿಳೆ ಹಾಗೂ ಆಕೆಯ ಜೊತೆಗಿದ್ದ ಇತರರನ್ನು ನೋಡಿದ್ದಾರೆ. ಬಳಿಕ ಕಾಮುಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ಮಹಿಳೆಯು ಗ್ರಾಮಸ್ಥರಿಗೆ ಹೇಳಿದ್ದು, ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಮಹಿಳೆಯ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ನಿವಾಸ್ ಮಿಶ್ರಾ, ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ದೊರಕಿದೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ತನಿಖೆಯಲ್ಲಿ ಎಲ್ಲರೂ ಮದ್ಯ ಸೇವಿಸಿರುವುದು ತಿಳಿದುಬಂದಿದ್ದು, ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿನಿ ಮೇಲೆ ಕಾಮುಕರ ಅಟ್ಟಹಾಸ : ಕಳೆದ ಕೆಲವು ತಿಂಗಳುಗಳ ಹಿಂದೆ ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿತ್ತು. ಅರಣ್ಯ ಪ್ರದೇಶಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಆರು ಮಂದಿ ಕಾಮುಕರು ಅತ್ಯಾಚಾರವೆಸಗಿದ್ದರು. ಜೊತೆಗೆ ವಿದ್ಯಾರ್ಥಿಯನ್ನು ಬೆತ್ತಲೆ ಮಾಡಿ ಥಳಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

ವೈರಲ್​ ವಿಡಿಯೋದಲ್ಲಿ ಆರೋಪಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಕೈಯಲ್ಲಿ ಬೆಲ್ಟ್​ ಹಾಗೂ ದೊಣ್ಣೆ ಹಿಡಿದು ಯುವತಿ ಮೇಲೆ ಹಲ್ಲೆ ನಡೆಸಿದ್ದರು. ಹಮೀರ್​ಪುರ್ ಸಿಟಿ ಫಾರೆಸ್ಟ್​ ಪ್ರದೇಶದಲ್ಲಿ ಘಟನೆ ನಡೆದಿತ್ತು.

ಇದನ್ನೂ ಓದಿ : 26 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕೇರಳ ಶಿಕ್ಷಕ ಅರೆಸ್ಟ್: ಪೋಕ್ಸೋ ಕಾಯ್ದೆಯಡಿ ಕೇಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.