ETV Bharat / bharat

ಕೊಚ್ಚಿ ಬ್ಯೂಟಿ ಪಾರ್ಲರ್ ಫೈರಿಂಗ್ ಕೇಸ್: ರವಿ ಪೂಜಾರಿಗೆ ನ್ಯಾಯಾಂಗ ಬಂಧನ - ರವಿ ಪೂಜಾರಿಗೆ ನ್ಯಾಯಾಂಗ ಬಂಧನ

2018 ರಲ್ಲಿ ಎರ್ನಾಕುಲಂನ ಕಡವಂತರದಲ್ಲಿರುವ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿಪಾರ್ಲರ್‌ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಜೂನ್ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Gangster Ravi Pujari sent to judicial custody in 2018 beauty parlour shooting case
ನ್ಯಾಯಾಂಗ ಬಂಧನಕ್ಕೆ ಭೂಗತ ಪಾತಕಿ
author img

By

Published : Jun 9, 2021, 7:54 AM IST

ಕೊಚ್ಚಿ(ಕೇರಳ): 2018 ರ ಬ್ಯೂಟಿ ಪಾರ್ಲರ್ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಜೂನ್ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕೊಚ್ಚಿಯ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡು ಬೆಂಗಳೂರು ಪೊಲೀಸರಿಂದ ಬಂಧನಕ್ಕೊಳಗಾಗಿ ಸೆಂಟ್ರಲ್ ಜೈಲಿನಲ್ಲಿದ್ದ ಪಾತಕಿ ರವಿ ಪೂಜಾರಿಯನ್ನು ಕೇರಳ ಪೊಲೀಸರು 8 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು.

2018 ರಲ್ಲಿ ಎರ್ನಾಕುಲಂನ ಕಡವಂತರದಲ್ಲಿರುವ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿಪಾರ್ಲರ್‌ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ವರ್ಗೀಸ್ ಮತ್ತು ಬಿಲಾಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು.

ಇವರು ಪಾತಕಿ ರವಿ ಪೂಜಾರಿ ಸಹಚರರು ಎನ್ನಲಾಗ್ತಿದೆ. ಈ ಸಂಬಂಧ ಮಂಗಳವಾರ ನಗರಕ್ಕೆ ಆಗಮಿಸಿದ್ದ ಕೇರಳ ಪೊಲೀಸರು ಬಾಡಿವಾರೆಂಟ್ ಮೇಲೆ 8 ದಿನಗಳ ಕಾಲ ರವಿ ಪೂಜಾರಿಯನ್ನು ವಶಕ್ಕೆ ಪಡೆದುಕೊಂಡು ಪರಪ್ಪನ ಅಗ್ರಹಾರ ಜೈಲಿನಿಂದ ಕರೆದೊಯ್ದಿದ್ದರು.

ಎರಡು ದಶಕಗಳ ಹಿಂದೆ ದೇಶ ಬಿಟ್ಟು ಪರಾರಿಯಾಗಿದ್ದ ಈತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ನಡುವೆ ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳ ನೀಡಿದ ಮಾಹಿತಿ ಮೇರೆಗೆ ಕಳೆದ ವರ್ಷ 2019 ಜ.19 ರಂದು ಸೆನೆಗಲ್ ಪೊಲೀಸರು ಬಂಧಿಸಿದ್ದರು.

ಆದರೆ ಭಾರತಕ್ಕೆ ಆರೋಪಿಯನ್ನು ಹಸ್ತಾಂತರಿಸಲು ಕಾನೂನು‌ ಸಮಸ್ಯೆ ಎದುರಾಗಿತ್ತು. ಅಂತಿಮವಾಗಿ ಕಾನೂನು ಹೋರಾಟ ಪ್ರಕ್ರಿಯೆ ಮುಗಿಸಿಕೊಂಡು ದೇಶಕ್ಕೆ ಕರೆತರುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದರು.

ಓದಿ: ಕೊಚ್ಚಿ ಬ್ಯೂಟಿಪಾರ್ಲರ್ ಮೇಲೆ ಗುಂಡಿನ ದಾಳಿ ಪ್ರಕರಣ: 8 ದಿನಗಳ ಕಾಲ ರವಿ ಪೂಜಾರಿ ಕೇರಳ ಪೊಲೀಸರ ವಶಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.