ಕೋಲ್ಕತ್ತಾ(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೈಗಾರಿಕೋದ್ಯಮಿ ಗೌತಮ್ ಅದಾನಿ ಇಂದು ಪರಸ್ಪರ ಭೇಟಿಯಾಗಿದ್ದು, ಸುಮಾರು 90 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಈ ವೇಳೆ, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ದೀದಿ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕೋಲ್ಕತ್ತಾದ ರಾಜ್ಯ ಸಚಿವಾಲಯ ನಬನ್ನಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಗಿದ್ದು, ಇದರ ಬಗ್ಗೆ ಕೈಗಾರಿಕೋದ್ಯಮಿ ಗೌತಮ್ ಅದಾನಿ ಕೂಡ ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
-
Delighted to meet @MamataOfficial, Hon'ble Chief Minister Mamata Banerjee.
— Gautam Adani (@gautam_adani) December 2, 2021 " class="align-text-top noRightClick twitterSection" data="
Discussed different investment scenarios and the tremendous potential of West Bengal. I look forward to attending the Bengal Global Business Summit (BGBS) in April 2022. pic.twitter.com/KGhFRJYOA4
">Delighted to meet @MamataOfficial, Hon'ble Chief Minister Mamata Banerjee.
— Gautam Adani (@gautam_adani) December 2, 2021
Discussed different investment scenarios and the tremendous potential of West Bengal. I look forward to attending the Bengal Global Business Summit (BGBS) in April 2022. pic.twitter.com/KGhFRJYOA4Delighted to meet @MamataOfficial, Hon'ble Chief Minister Mamata Banerjee.
— Gautam Adani (@gautam_adani) December 2, 2021
Discussed different investment scenarios and the tremendous potential of West Bengal. I look forward to attending the Bengal Global Business Summit (BGBS) in April 2022. pic.twitter.com/KGhFRJYOA4
ಪಶ್ಚಿಮ ಬಂಗಾಳದಲ್ಲಿ ವ್ಯಾಪಾರ ಉದ್ದಿಮೆಗೋಸ್ಕರ ಆಹ್ವಾನ ನೀಡಿರುವ ದೀದಿ, ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಅದಾನಿ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ: ರಾಕೇಶ್ ಟಿಕಾಯತ್ ಭೇಟಿಗೆ ಬಂದ ವಿದೇಶದಲ್ಲಿ ವ್ಯಾಸಂಗ ಮಾಡ್ತಿದ್ದ ರೈತನ ಮಗಳು... ಕಾರಣ!?
ಟ್ವೀಟ್ ಮಾಡಿದ ಅದಾನಿ
ಮಾನ್ಯ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಅವರನ್ನ ಭೇಟಿ ಮಾಡಿರುವುದು ಸಂತೋಷವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆಯಲ್ಲಿ ಭಾಗಿಯಾಗಲು ಆಹ್ವಾನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.