ETV Bharat / bharat

ಸಿಡಿಎಸ್​ ಬಿಪಿನ್ ರಾವತ್​ಗೆ ಮರಣೋತ್ತರ ಪದ್ಮವಿಭೂಷಣ.. ಕೋವ್ಯಾಕ್ಸಿನ್​ ತಯಾರಕ ಕೃಷ್ಣ ಎಲ್ಲಾ, ಪೂನಾವಾಲಾಗೂ ಗೌರವ

author img

By

Published : Jan 25, 2022, 9:41 PM IST

Padma Awards 2022: ಭಾರತದ ಅತ್ಯುನ್ನತ ನಾಗರಿ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನ ಕೇಂದ್ರ ಸರ್ಕಾರ ಪ್ರಕಟಿಸಿದ್ದು, ಪ್ರಮುಖವಾಗಿ 2022ನೇ ಸಾಲಿನಲ್ಲಿ ಒಟ್ಟು 128 ಸಾಧಕರಿಗೆ ಗೌರವಿಸಲಾಗಿದೆ. ಈ ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥ ದಿವಂಗತ ಬಿಪಿನ್ ರಾವತ್​​ ಅವರಿಗೆ ಮರಣೋತ್ತರ ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ.

Gen Bipin Rawat Padma Award
Gen Bipin Rawat Padma Award

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿರುವ ದೇಶದ ಪ್ರಮುಖ ಸಾಧಕರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆಯಾಗಿದೆ. ಕಳೆದ ವರ್ಷ ಹೆಲಿಕಾಪ್ಟರ್​ ಅವಘಡದಲ್ಲಿ ಹುತಾತ್ಮರಾಗಿರುವ ಭಾರತದ ಮೊದಲ ರಕ್ಷಣಾ ಸಿಬ್ಬಂದಿ ಜನರಲ್(ಸಿಡಿಎಸ್​​) ಬಿಪಿನ್ ರಾವತ್​​ ಅವರಿಗೆ ಪದ್ಮವಿಭೂಷಣ ಘೋಷಿಸಲಾಗಿದೆ.

  • Microsoft CEO Satya Nadella, Alphabet CEO Sundar Pichai, SII MD Cyrus Poonawalla to be conferred with Padma Bhushan

    Olympians Neeraj Chopra, Pramod Bhagat & Vandana Kataria, and singer Sonu Nigam to be awarded Padma Shri pic.twitter.com/J5K9aX9Qxz

    — ANI (@ANI) January 25, 2022 " class="align-text-top noRightClick twitterSection" data=" ">

ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್​ ಅವರು ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ತಮಿಳುನಾಡಿನ ಕನೂರಿನಲ್ಲಿ ನಡೆದ ವಾಯುಪಡೆ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿದ್ದರು. ಇವರ ಸಾಧನೆ ಪರಿಗಣನೆಗೆ ತೆಗೆದುಕೊಂಡಿರುವ ಕೇಂದ್ರ ಸರ್ಕರ ಇದೀಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸುವ ಮೂಲಕ ಕೇಂದ್ರ ಸರ್ಕಾರ ಗೌರವ ನೀಡಿದೆ. ಇದರ ಜೊತೆಗೆ ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಉಳಿದಂತೆ ಪ್ರಭಾ ಅತ್ರೆ (ಕಲೆ; ಮಹಾರಾಷ್ಟ್ರ), ರಾಧೇಶ್ಯಾಮ್ ಖೆಮ್ಕಾ (ಸಾಹಿತ್ಯ ಮತ್ತು ಶಿಕ್ಷಣ, ಮರಣೋತ್ತರ, ಉತ್ತರ ಪ್ರದೇಶ) ಅವರಿಗೂ ಗೌರವ ನೀಡಲಾಗಿದೆ.

ಇದನ್ನೂ ಓದಿರಿ: ದಲಿತ ಕವಿ ದಿ. ಸಿದ್ದಲಿಂಗಯ್ಯ ಸೇರಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪುರಸ್ಕಾರ

ಲಸಿಕೆ ತಯಾಕರಿಗೆ ಪದ್ಮಭೂಷಣ ಗೌರವ.. ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಕಂಡು ಹಿಡಿದಿರುವ ಭಾರತ್ ಬಯೋಟೆಕ್​ನ ಮುಖ್ಯಸ್ಥ ಡಾ. ಕೃಷ್ಣ ಎಲ್ಲಾ ಹಾಗೂ ಅವರ ಪತ್ನಿ ಸುಚಿತ್ರ ಎಲ್ಲಾ ಅವರಿಗೆ ಪದ್ಮಭೂಷಣ ಗರಿ ಒಲಿದಿದೆ.

ಇವರ ಜೊತೆಗೆ ಸೀರಂ ಸಂಸ್ಥೆಯ ಸಂಸ್ಥಾಪಕರಾದ ಸೈರಸ್ ಪೂನಾವಾಲ ಅವರಿಗೂ ಪ್ರಶಸ್ತಿ ನೀಡಲಾಗಿದೆ. ಈ ಎರಡು ಸಂಸ್ಥೆಗಳ ವ್ಯಾಕ್ಸಿನ್​ಗಳು ಇದೀಗ ಭಾರತ ಮಾತ್ರವಲ್ಲದೆ, ನೂರಾರು ದೇಶಗಳಿಗೆ ಸರಬರಾಜು ಆಗ್ತಿದ್ದು, ಕೋವಿಡ್​ ವಿರುದ್ಧದ ಹೋರಾಟದಲ್ಲಿ ಮುಖ್ಯ ಪಾತ್ರ ವಹಿಸಿವೆ. ಇದರ ಜೊತೆಗೆ ಕಾಂಗ್ರೆಸ್​ ಮುಖಂಡ ಗುಲಾಬ್ ನಬಿ ಆಜಾದ್​ ಅವರಿಗೆ ಪದ್ಮಭೂಷಣ ನೀಡಲಾಗಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ, ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೂ ಪದ್ಮಭೂಷಣ ಪ್ರಶಸ್ತಿ ಒಲಿದಿದೆ.

ಈ ಸಲದ 128 ಪದ್ಮ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳು ಇವೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.