ಶಹದೋಲ್ (ಮಧ್ಯಪ್ರದೇಶ): ಮಧ್ಯಪ್ರದೇಶ ಸರ್ಕಾರವು ಅನುಮತಿಯಿಲ್ಲದೇ ತಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ದಿವಂಗತ ಜನರಲ್ ಬಿಪಿನ್ ರಾವತ್ ಅವರ ಕಿರಿಯ ಸೋದರ ಮಾವ ಯಶವರ್ಧನ್ ಸಿಂಗ್ ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ತಮ್ಮ ಸಹೋದರಿ ಮಧುಲಿಕಾ ರಾವತ್ ಮತ್ತವರ ಪತಿ ಜನರಲ್ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಲ್ಲಿದ್ದಾಗ ಪೂರ್ವಾನುಮತಿ ಇಲ್ಲದೇ ತಮ್ಮ ಜಮೀನನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ. ಜಮೀನಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ತರೂರು ಶಾಹದೋಲ್‌ಗೆ ಹೊಂದಿಕೊಂಡಿರುವ ರಾಜಬಾಗ್ ಸೊಹಾಗ್‌ಪುರ ಪ್ರದೇಶದಲ್ಲಿ ಯಶವರ್ಧನ್ ಸಿಂಗ್ ಅವರು ತುಂಡು ಭೂಮಿ ಹೊಂದಿದ್ದಾರೆ. ಮುಖ್ಯರಸ್ತೆಗೆ ಹೊಂದಿಕೊಂಡಿರುವ ಈ ಭೂಮಿಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಬಳಸಿಕೊಳ್ಳುತ್ತಿದೆ.
ತಮಗೆ ಯಾವುದೇ ಪೂರ್ವ ಮಾಹಿತಿ ನೀಡಿಲ್ಲ. ಗುತ್ತಿಗೆದಾರರು ನಿರ್ಮಾಣ ಸ್ಥಳಕ್ಕೆ ಕರೆಸಿದಾಗ ನನಗೆ ಈ ವಿಷಯ ತಿಳಿಯಿತು. ತಮ್ಮ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ಯಶವರ್ಧನ್ ಆರೋಪಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿ ಜತೆ ಮಾತನಾಡಿದ್ದೇನೆ. ಆದರೆ, ಯಾವುದೇ ರೀತಿಯ ಭೂಸ್ವಾಧೀನದ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿ ವಂದನಾ ವೈದ್ಯ ತನಿಖೆಗೆ ಆದೇಶಿಸಿದ್ದು, ತಹಸೀಲ್ದಾರ್ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಶಾಹದೋಲ್ ಎಸ್ಪಿ ಅವರಿಂದ ಸಂಪೂರ್ಣ ಮಾಹಿತಿ ಕೇಳಿದ್ದಾರೆ. ಈ ವಿಚಾರದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಭೂಸ್ವಾಧೀನವಾಗಿದ್ದರೆ ಖುದ್ದಾಗಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಟ್ವೀಟ್ ಮಾಡಿದ್ದಾರೆ.
-
अगर पुलिस द्वारा किसी भी तरह का पूर्वाग्रह इस मामले में बरता गया है और किसी भी तरह की अवैधानिक कार्यवाही को प्रश्रय दिया है तो मैं खुद पूरे मामले को देखूगा और जो भी दोषी होगा उस पर कड़ी कार्रवाई होगी।
— Dr Narottam Mishra (@drnarottammisra) December 14, 2021 " class="align-text-top noRightClick twitterSection" data="
">अगर पुलिस द्वारा किसी भी तरह का पूर्वाग्रह इस मामले में बरता गया है और किसी भी तरह की अवैधानिक कार्यवाही को प्रश्रय दिया है तो मैं खुद पूरे मामले को देखूगा और जो भी दोषी होगा उस पर कड़ी कार्रवाई होगी।
— Dr Narottam Mishra (@drnarottammisra) December 14, 2021अगर पुलिस द्वारा किसी भी तरह का पूर्वाग्रह इस मामले में बरता गया है और किसी भी तरह की अवैधानिक कार्यवाही को प्रश्रय दिया है तो मैं खुद पूरे मामले को देखूगा और जो भी दोषी होगा उस पर कड़ी कार्रवाई होगी।
— Dr Narottam Mishra (@drnarottammisra) December 14, 2021
ಇದನ್ನೂ ಓದಿ: Army chopper crash case: ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ