ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಿದ್ದರ ವಿರುದ್ಧ ಅಮೆರಿಕ ಪ್ರತಿಕ್ರಿಯಿಸಿದ ಬಳಿಕ ಇದೀಗ ಜರ್ಮನಿ ಕೂಡ ಈ ಬಗ್ಗೆ ಮಾತನಾಡಿದೆ. ರಾಹುಲ್ ಅನರ್ಹ ಪ್ರಕರಣವನ್ನು ಗಮನಿಸುತ್ತಿರುವುದಾಗಿ ಆ ದೇಶದ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ.
"ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅನರ್ಹತೆ ಪ್ರಕರಣವನ್ನು ನಾವು ಗಮನಿಸಿದ್ದೇವೆ. ರಾಹುಲ್ ಅವರು ಈ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸುವ ಸಿದ್ಧತೆಯಲ್ಲಿದ್ದಾರೆ" ಎಂದು ಜರ್ಮನ್ ವಿದೇಶಾಂಗ ಸಚಿವಾಲಯದ ವಕ್ತಾರ ನೀಡಿರುವ ಹೇಳಿಕೆಯನ್ನು ಸರ್ಕಾರಿ ಸ್ವಾಮ್ಯದ ಮಾಧ್ಯಮದಲ್ಲಿ ಪ್ರಸಾರವಾಗಿದೆ.
"ಮೇಲ್ಮನವಿ ಸಲ್ಲಿಸಿದ ಬಳಿಕ ಈ ತೀರ್ಪು ನಿಲ್ಲುತ್ತದೆಯೇ ಅಥವಾ ಆದೇಶ ಅಮಾನತಾಗುತ್ತದೆಯೇ ಎಂಬುದು ನಂತರ ಸ್ಪಷ್ಟವಾಗುತ್ತದೆ. ನ್ಯಾಯಾಂಗವು ಅಭಿವ್ಯಕ್ತಿ ಸ್ವಾತಂತ್ರ್ಯದ ಮಾನದಂಡಗಳು ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಪ್ರಕರಣದಲ್ಲಿ ಪರಿಗಣಿಸುತ್ತದೆ ಎಂಬ ನಿರೀಕ್ಷೆ ಇದೆ" ಎಂದು ಅವರು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಅಮೆರಿಕ ಸರ್ಕಾರದ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಅವರು, ಭಾರತೀಯ ಕೋರ್ಟ್ನಲ್ಲಿ ರಾಹುಲ್ ಗಾಂಧಿ ಅವರ ಪ್ರಕರಣವನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ. ಕಾನೂನು ಮತ್ತು ಸ್ವಾತಂತ್ರ್ಯ ನ್ಯಾಯಾಂಗ ಯಾವುದೇ ದೇಶದ ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವಾಗಿದೆ. ಕೋರ್ಟ್ನಲ್ಲಿರುವ ರಾಹುಲ್ ಗಾಂಧಿ ಅನರ್ಹ ಪ್ರಕರಣವನ್ನು ಗಮನಿಸಲಾಗುವುದು. ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಸತ್ತಾತ್ಮಕ ಮೌಲ್ಯಗಳ ಆಧಾರದ ಮೇಲೆ ಅಮೆರಿಕವು ಭಾರತ ಸರ್ಕಾರದೊಂದಿಗೆ ನಿಲ್ಲುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
ಟ್ವಿಟರ್ನಲ್ಲಿ ಫೈಟ್: ರಾಹುಲ್ ಗಾಂಧಿ ವಿಚಾರವನ್ನು ಜರ್ಮನಿ ಪ್ರಸ್ತಾಪಿಸಿದ್ದಕ್ಕೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಧನ್ಯವಾದ ಹೇಳಿದ್ದಾರೆ. ಜರ್ಮನಿ ವಕ್ತಾರರ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡು, "ಜರ್ಮನಿಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಿಚರ್ಡ್ ವಾಕರ್ ಅವರಿಗೆ ಧನ್ಯವಾದಗಳು. ಪ್ರಜಾಪ್ರಭುತ್ವದ ಹೆಸರಿನಲ್ಲಿ ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡಲಾಗುತ್ತಿದೆ" ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.
-
Thank you Germany Foreign Affairs Ministry and Richard Walker @rbsw for taking note of how the Democracy is being compromised in India through persecution of @RahulGandhi https://t.co/CNy6fPkBi3
— digvijaya singh (@digvijaya_28) March 30, 2023 " class="align-text-top noRightClick twitterSection" data="
">Thank you Germany Foreign Affairs Ministry and Richard Walker @rbsw for taking note of how the Democracy is being compromised in India through persecution of @RahulGandhi https://t.co/CNy6fPkBi3
— digvijaya singh (@digvijaya_28) March 30, 2023Thank you Germany Foreign Affairs Ministry and Richard Walker @rbsw for taking note of how the Democracy is being compromised in India through persecution of @RahulGandhi https://t.co/CNy6fPkBi3
— digvijaya singh (@digvijaya_28) March 30, 2023
ಈ ಬಗ್ಗೆ ಆಕ್ಷೇಪಿಸಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, "ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ವಿದೇಶಿ ಶಕ್ತಿಗಳನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು ರಾಹುಲ್ ಗಾಂಧಿ ಅವರೇ. ನೆನಪಿಡಿ, ಭಾರತದ ನ್ಯಾಯಾಂಗವು ಸ್ವತಂತ್ರವಾಗಿದೆ. ವಿದೇಶಿಗರ ಹಸ್ತಕ್ಷೇಪಕ್ಕೆ ಒಳಗಾಗುವುದಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.
-
Thank you Rahul Gandhi for inviting foreign powers for interference into India’s internal matters. Remember, Indian Judiciary can't be influenced by foreign interference. India won't tolerate 'foreign influence' anymore because our Prime Minister is:- Shri @narendramodi Ji 🇮🇳 pic.twitter.com/xHzGRzOYTz
— Kiren Rijiju (@KirenRijiju) March 30, 2023 " class="align-text-top noRightClick twitterSection" data="
">Thank you Rahul Gandhi for inviting foreign powers for interference into India’s internal matters. Remember, Indian Judiciary can't be influenced by foreign interference. India won't tolerate 'foreign influence' anymore because our Prime Minister is:- Shri @narendramodi Ji 🇮🇳 pic.twitter.com/xHzGRzOYTz
— Kiren Rijiju (@KirenRijiju) March 30, 2023Thank you Rahul Gandhi for inviting foreign powers for interference into India’s internal matters. Remember, Indian Judiciary can't be influenced by foreign interference. India won't tolerate 'foreign influence' anymore because our Prime Minister is:- Shri @narendramodi Ji 🇮🇳 pic.twitter.com/xHzGRzOYTz
— Kiren Rijiju (@KirenRijiju) March 30, 2023
ಪ್ರಕರಣವೇನು?: 2019 ರ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 'ಮೋದಿ ಉಪನಾಮ'ವನ್ನು ಬಳಸಿಕೊಂಡು ವಿವಾದಿತ ಹೇಳಿಕೆ ನೀಡಿದ್ದರು. ಇದು ಹಿಂದುಳಿದ ಸಮುದಾಯದ ವಿರುದ್ಧ ಮಾಡಿದ ಅವಮಾನ ಎಂದು ಆಕ್ಷೇಪಿಸಿ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಎಂಬುವರು ಸೂರತ್ ಕೋರ್ಟ್ನಲ್ಲಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು.
4 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆದು, ಮಾರ್ಚ್ 23 ರಂದು ಸೂರತ್ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿಯಾಗಿದ್ದಾರೆ. ಈ ರೀತಿಯ ಹೇಳಿಕೆಯನ್ನು ಸಮರ್ಥಿಸಲಾಗುವುದಿಲ್ಲ. ಇದು ಸಮಾಜದಲ್ಲಿ ಒಳ್ಳೆಯ ನಡೆಯಲ್ಲ ಎಂದು ಹೇಳಿ, 2 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿ ಆದೇಶಿಸಿತ್ತು. ರಾಹುಲ್ ಮನವಿ ಮೇರೆಗೆ ಬಂಧನದಿಂದ ಕಾಪಾಡಲು 30 ದಿನ ಗಡುವು ನೀಡಿದೆ. ಇಷ್ಟರೊಳಗೆ ತೀರ್ಪಿನ ವಿರುದ್ಧ ಕಾನೂನಿನಡಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.
ಇದಾದ ಬಳಿಕ ಸಂಸತ್ತು ನಿಯಮದ ಪ್ರಕಾರ, ರಾಹುಲ್ ಅವರನ್ನು ಕ್ರಿಮಿನಲ್ ಶಿಕ್ಷೆಯ ಆಧಾರದ ಮೇಲೆ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಇದು ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಮೇಲ್ಮನವಿಗೂ ಅವಕಾಶ ನೀಡದೇ ಅಮಾನತು ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿ ದೇಶದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದೆ.
ಇದನ್ನೂ ಓದಿ: 2019ರ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ, ಜಾಮೀನು ಮಂಜೂರು