ETV Bharat / bharat

ಹಿಂದೂ ಸಂಘಟನೆ ಜೊತೆ ಗುರುತಿಸಿಕೊಂಡಿದ್ದೇ ತಪ್ಪಾಯ್ತು; ವೈದ್ಯರ ತಲೆ ಕತ್ತರಿಸುವ ಬೆದರಿಕೆ

ಹಿಂದೂ ಸಂಘಟನೆ ಜೊತೆ ಗುರುತಿಸಿಕೊಂಡಿದ್ದಾರೆಂಬ ಕಾರಣಕ್ಕಾಗಿ ವೈದರಿಗೆ ತಲೆ ಕತ್ತರಿಸುವುದಾಗಿ ಬೆದರಿಕೆ ಹಾಕಲಾಗಿದೆ.

author img

By

Published : Sep 13, 2022, 1:59 PM IST

Updated : Sep 13, 2022, 2:13 PM IST

ghaziabad doctor received threat to sever his head

ನವದೆಹಲಿ/ಗಾಜಿಯಾಬಾದ್​: ದೇಶದಲ್ಲಿ ಈಗಾಗಲೇ ಅನೇಕ ಹಿಂದೂ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗೆ ಬೆಂಬಲ ವ್ಯಕ್ತಪಡಿಸಿದವರ ಕೊಲೆ ನಡೆದು ಹೋಗಿವೆ. ಇದೀಗ ವೈದ್ಯರೊಬ್ಬರಿಗೆ ಕೊಲೆ ಬೆದರಿಕೆ ಬಂದಿದೆ. ಹಿಂದೂ ಸಂಘಟನೆ ಜೊತೆ ಗುರುತಿಸಿಕೊಂಡಿದ್ದಕ್ಕಾಗಿ ಅಮೆರಿಕ ನಂಬರ್​​​ನಿಂದ ಬೆದರಿಕೆ ಕರೆ ಬಂದಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್​​ನ ಸಿಹಾನಿ ಗೇಟ್​ ಪ್ರದೇಶದಲ್ಲಿ ವಾಸವಾಗಿರುವ ಡಾ. ಅರವಿಂದ್ ವತ್ಸ್ ಅಕೇಲಾ ಅವರು ಬೆದರಿಕೆ ಕರೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವಾಟ್ಸ್​ಆ್ಯಪ್​​ನಲ್ಲಿ ಬೆದರಿಕೆ ಹಾಕಲಾಗಿದ್ದು, ಆ ನಂಬರ್​​ಗೆ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ ವ್ಯಕ್ತಿಯೋರ್ವ ಕರೆ ಮಾಡಿ ನನ್ನೊಂದಿಗೆ ಐದು ನಿಮಿಷಗಳ ಕಾಲ ಮಾತನಾಡಿದ್ದು, 'ನಿನ್ನನ್ನು ಉಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕನ್ಹಯ್ಯ ಲಾಲ್ ಮತ್ತು ಡಾ. ಉಮೇಶ್​ ಅವರನ್ನ ಎಲ್ಲಿಗೆ ಕಳುಹಿಸಿದ್ದಾರೋ ನಿನ್ನನ್ನು ಅಲ್ಲಿಗೆ ಕಳುಹಿಸಲಾಗುವುದು. ನಿನ್ನ ತಲೆ ಕತ್ತರಿಸಲಾಗುವುದು' ಎಂದು ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ.

ವೈದ್ಯರ ತಲೆ ಕತ್ತರಿಸುವ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಪ್ರಧಾನಿ ನರೇಂದ್ರ ಮೋದಿ ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಂದಲೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ ಎಂದು ಅವರು ಬೆದರಿಕೆ ಹಾಕಿದ್ದಾರೆಂದು ವೈದ್ಯರು ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಪ್ರಕರಣ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರ ಅರೆಸ್ಟ್​

ಯಾವ ಕಾರಣಕ್ಕಾಗಿ ಕೊಲೆ ಬೆದರಿಕೆ: ಡಾ. ಅರವಿಂದ್ ವತ್ಸ್​ ಅಕೇಲಾ ಅವರು ಸ್ವಂತಃ ಕ್ಲಿನಿಕ್​ ಹೊಂದಿದ್ದಾರೆ. ಇದರ ಜೊತೆಗೆ ಹಿಂದೂ ಸಂಘಟನೆ ಜೊತೆ ಗುರುತಿಸಿಕೊಂಡಿದ್ದು, ವಿವಿಧ ಸಮಾಜಮುಖಿ ಕೆಲಸಗಳಲ್ಲಿ ಭಾಗಿಯಾಗಿದ್ದಾರೆ. ಇದರ ಬೆನ್ನಲ್ಲೇ ಕೊಲೆ ಬೆದರಿಕೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ಗಾಜಿಯಾಬಾದ್​ ಪೊಲೀಸ್ ಅಧಿಕಾರಿ ಮುನಿರಾಜ್ ತಿಳಿಸಿದ್ದಾರೆ.

ಮೊಹಮ್ಮದ್ ಪೈಂಗಬರ್ ಕುರಿತು ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ನಂತರ ದೇಶದಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಅನೇಕ ಕೊಲೆ ಪ್ರಕರಣಗಳು ನಡೆದು ಹೋಗಿವೆ. ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್​ ಅವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಳೆದ ಕೆಲದಿನಗಳ ಹಿಂದೆ ಬಿಜೆಪಿ ನಾಯಕ ಪಂಕಜ್ ತ್ಯಾಗಿ ಅವರಿಗೂ ತಲೆ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

Last Updated : Sep 13, 2022, 2:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.