ETV Bharat / bharat

ದೆಹಲಿಯಲ್ಲಿ ನಿಲ್ಲದ ದುಷ್ಕೃತ್ಯ: ಗಾಜಿಯಾಬಾದ್​ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳ ಬಂಧನ - ದೆಹಲಿ ಗ್ಯಾಂಗ್​ರೇಪ್​ ಪ್ರಕರಣ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಾಚಾರದಂತಹ ಅಮಾನವೀಯ ಕೃತ್ಯಗಳು ನಿಲ್ಲುವ ಯಾವುದೇ ಲಕ್ಷಣಗಳು ಗೋಚರವಾಗುತ್ತಿಲ್ಲ. ಸದ್ಯ ಮತ್ತೊಂದು ಅಮಾನವೀಯ ದುಷ್ಕೃತ್ಯ ನಡೆದಿದ್ದು, ಆರೋಪಿಗಳ ಬಂಧನ ಮಾಡಲಾಗಿದೆ.

Ghaziabad teen gang-rape
Ghaziabad teen gang-rape
author img

By

Published : Aug 2, 2021, 3:25 PM IST

ಗಾಜಿಯಾಬಾದ್​: 14 ವರ್ಷದ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ದುಷ್ಕೃತ್ಯದಲ್ಲಿ ಭಾಗಿಯಾಗಿರುವ ನಾಲ್ಕನೇ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

14 ವರ್ಷದ ಬಾಲಕಿ ಮೇಲೆ ದೆಹಲಿಯ ಕೊಡ್ಲಿ ಪ್ರದೇಶದಲ್ಲಿ ಜುಲೈ 27ರ ರಾತ್ರಿ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಘಟನೆಗೆ ಸಂಬಂಧಿಸಿದಂತೆ ಬಾಲಕಿ ಪೋಷಕರು ಪ್ರಕರಣ ದಾಖಲು ಮಾಡಿದ್ದರು. ಬಾಲಕಿಗೆ ಪರಿಚಯವಿರುವ ವ್ಯಕ್ತಿಯೊಬ್ಬ ಕೊಡ್ಲಾ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದನು. ಇದಾದ ಬಳಿಕ ಕಾರಿನಲ್ಲಿ ಕುಳ್ಳಿರಿಸಿಕೊಂಡು MIG ಪ್ಲಾಟ್​ಗೆ ಕರೆದುಕೊಂಡು ಹೋಗಿ, ತನ್ನ ಸ್ನೇಹಿತರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು.

ಘಟನೆ ನಂತರ ಆಕೆಯನ್ನ ರಸ್ತೆವೊಂದರಲ್ಲಿ ಬಿಟ್ಟು, ಇದರ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆದರೆ, ಬಾಲಕಿ ತನ್ನ ಮೇಲೆ ನಡೆದ ದುಷ್ಕೃತ್ಯದ ಬಗ್ಗೆ ಮನೆಯಲ್ಲಿ ಮಾಹಿತಿ ನೀಡಿದ್ದಳು. ಇದಾದ ಬಳಿಕ ಪ್ರಕರಣ ದಾಖಲು ಮಾಡಲಾಗಿತ್ತು. ದೂರು ದಾಖಲು ಮಾಡಿಕೊಂಡು ಶೋಧಕಾರ್ಯ ಆರಂಭಿಸಿದ ಪೊಲೀಸರು ಮೂವರ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಆರೋಪಿಗೋಸ್ಕರ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಅಭಯ ಕುಮಾರ್​ ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿರಿ: ಸ್ನೇಹಿತನ ರಕ್ಷಣೆಗೆ ಹೋಗಿ ಪ್ರಾಣ ಕಳೆದುಕೊಂಡ ಮೂವರು...'ಫ್ರೆಂಡ್​ಶಿಪ್ ಡೇ'ಯಂದೇ ನಡೆದ ದುರ್ಘಟನೆ!

ರಾಜಧಾನಿಯಲ್ಲಿ ಮತ್ತೊಂದು ಅತ್ಯಾಚಾರ

9 ಹಾಗೂ 14 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೋರ್ವ ಅಪ್ರಾಪ್ತೆ ಮೇಲೆ ಗ್ಯಾಂಗ್​ರೇಪ್​ ಮಾಡಲಾಗಿದ್ದು, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ದುಷ್ಕೃತ್ಯ ಎಸಗಲಾಗಿದೆ. ಬಾಲಕಿ ಗರ್ಭಣಿಯಾಗುತ್ತಿದ್ದಂತೆ ಪ್ರಕರಣ ದಾಖಲಾಗಿದ್ದು, ಈಗಾಗಲೇ ಆರೋಪಿಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಫೇಸ್​ಬುಕ್​ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ದುಷ್ಕೃತ್ಯವೆಸಗಿದ್ದು, ಆತನ ಬಂಧನ ಮಾಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.