ನವದೆಹಲಿ: ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿರುವುದನ್ನು ಗಂಭೀರ ವಿಚಾರ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಅಭಿಪ್ರಾಯಪಟ್ಟಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬೀ ಆಜಾದ್ ಸೇರಿದಂತೆ ಕಾಂಗ್ರೆಸ್ನ ಜಿ-23 ಗುಂಪಿನ ಕೆಲವು ಸದಸ್ಯರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಕಾಂಗ್ರೆಸ್ ನಾಯಕರು ಯಾವಾಗ ಪಕ್ಷದ ಹೈಕಮಾಂಡ್ ಅನ್ನು ಭೇಟಿಯಾಗಲಿದ್ದಾರೆ ಎಂದು ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಸೋನಿಯಾ ಗಾಂಧಿಯವರೊಂದಿಗೆ ಮಾತನಾಡಿದ ನಂತರ, ನಾವು ಸಭೆಯ ಸಮಯ ನಿಗದಿಪಡಿಸುತ್ತೇವೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಗುಲಾಂ ನಬೀ ಆಜಾದ್ ಮಾತ್ರ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಬೇಕಿತ್ತು. ಕಾಂಗ್ರೆಸ್ ಪಕ್ಷದಲ್ಲಿ ವ್ಯಾಪಕವಾದ ಸುಧಾರಣೆಗಳಿಗೆ ಜಿ - 23 ನಾಯಕರು ಕರೆ ನೀಡಿದ್ದು, ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬುಧವಾರವೇ ಸಭೆ ನಡೆಸಿ, ಚರ್ಚಿಸಿದ್ದಾರೆ. ಪಕ್ಷದ ನಾಯಕರಾದ ಕಪಿಲ್ ಸಿಬಲ್, ಭೂಪಿಂದರ್ ಸಿಂಗ್ ಹೂಡಾ, ಆನಂದ್ ಶರ್ಮಾ, ಮನೀಶ್ ತಿವಾರಿ, ಶಶಿ ತರೂರ್, ಮಣಿಶಂಕರ್ ಅಯ್ಯರ್, ಪಿಜೆ ಕುರಿಯನ್, ಪ್ರೀನೀತ್ ಕೌರ್, ಸಂದೀಪ್ ದೀಕ್ಷಿತ್ ಮತ್ತು ರಾಜ್ ಬಬ್ಬರ್ ಸೇರಿದಂತೆ ಹಲವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಅನಕ್ಷರಸ್ಥರಾಗಿದ್ದ ತರಕಾರಿ ವ್ಯಾಪಾರಿಗಳೂ ಈಗ ಓದಬಲ್ಲರು: ಕಾರಣ ಇಷ್ಟೇ!
ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಗುರುವಾರ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಜಿ-23 ಗುಂಪಿನ ಸದಸ್ಯರಾದ ಹೂಡಾ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಮಾಹಿತಿ ನೀಡಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಚುನಾವಣೆಗಳು ಮತ್ತು ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವ ನಿರ್ಧಾರಗಳು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಾತ್ರವೇ ಚರ್ಚೆ ಮಾಡಬೇಕು ಎಂದು ಹೂಡಾ ಸೂಚಿಸಿದ್ದರು.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ ನಂತರ ಉತ್ತರ ಭಾರತದ ರಾಜಕೀಯವನ್ನು ಅರ್ಥಮಾಡಿಕೊಳ್ಳುವ ಮತ್ತು ಹಿಂದಿಯನ್ನು ಚೆನ್ನಾಗಿ ತಿಳಿದಿರುವ ಅನುಭವಿ ವ್ಯಕ್ತಿಯನ್ನು ಆ ಸ್ಥಾನಕ್ಕೆ ನೇಮಿಸುವಂತೆ ಹೂಡಾ ರಾಹುಲ್ ಗಾಂಧಿಯರಲ್ಲಿ ಮನವಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ಜಿ-23 ನಾಯಕರು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಎಂದು ಹೂಡಾ ರಾಹುಲ್ ಗಾಂಧಿಯವರಿಗೆ ಸ್ಪಷ್ಟನೆ ನೀಡಿದ್ದರು.
ರಾಹುಲ್ ಗಾಂಧಿಯವರ ನಾಯಕತ್ವವನ್ನು ಶಂಕರಸಿನ್ಹ್ ವಘೇಲಾ ಮತ್ತು ಕಪಿಲ್ ಸಿಬಲ್ ಹೇಳಿದ ಎಲ್ಲವನ್ನು ನಾವು ಒಪ್ಪುವುದಿಲ್ಲ ಎಂದು ಹೂಡಾ ಹೇಳಿದ್ದು, ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ನಂಬಿಕೆ ಇರುವುದಾಗಿಯೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿತ್ತು.