ಉತ್ತರ 24 ಪರಗಣ, ಪಶ್ಚಿಮ ಬಂಗಾಳ: ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಗಳಿಂದ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ದೇಗಂಗಾದ ಹರೋಯಾ ರೈಲು ನಿಲ್ದಾಣದ ಪಕ್ಕದಲ್ಲಿರುವ ಹದಿಪುರ ಬಳಿಯ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆ ಬೆಳಕಿಗೆ ಬಂದ ಕೂಡಲೇ ಈ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸಹಪಾಠಿಗಳು ನೀಡಿದ ದೈಹಿಕ ಮತ್ತು ಮಾನಸಿಕ ಹಿಂಸೆಯಿಂದ ವಿದ್ಯಾರ್ಥಿನಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಘಟನೆ ಸಂಭವಿಸಿದಾಗಿನಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿ ಮತ್ತೆ ತನ್ನ ಶಾಲೆಗೆ ತೆರಳಲು ಹಿಂದೇಟು ಹಾಕುತ್ತಿದ್ದಾಳೆ ಎಂದು ಆಕೆಯ ತಾಯಿಗೆ ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಖಾಸಗಿ ಶಾಲೆಯ ಅಧಿಕಾರಿಗಳು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಬೇರೆ ದಾರಿ ಕಾಣದೆ ಸಂತ್ರಸ್ತೆಯ ಕುಟುಂಬಸ್ಥರು ದೇಗಂಗಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ವಿದ್ಯಾರ್ಥಿನಿ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ಪ್ರದೇಶ ನಿವಾ. ಫ್ರಂಟ್‌ಪೇಜ್ ಗರ್ಲ್ಸ್ ಅಕಾಡೆಮಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯ ಮೂಲಗಳ ಪ್ರಕಾರ, ವಿದ್ಯಾರ್ಥಿನಿಯು ತಾನು ಉಳಿದುಕೊಂಡಿರುವ ವಸತಿ ಸಂಕೀರ್ಣದಲ್ಲಿ ವಾಸಿಸುವ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾಳೆ. ಇತರ ಸಹಪಾಠಿಗಳು ಆಕೆಯ ಸ್ನೇಹವನ್ನು ಲೆಸ್ಬಿಯನ್ ಸಂಬಂಧವಾಗಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಆಕೆಯನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ವಿದ್ಯಾರ್ಥಿನಿ ಖಾಸಗಿ ಶಾಲೆಯ ಮುಖ್ಯ ಶಿಕ್ಷಕರಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲವಂತೆ. ಒಂದು ಮಗಳನ್ನು ನೋಡಲು ವಿದ್ಯಾರ್ಥಿನಿಯ ತಾಯಿ ವಸತಿ ಗೃಹಕ್ಕೆ ಭೇಟಿ ನೀಡಿದ್ದರು. ಆಗ ತಾಯಿಗೆ ಈ ಬಗ್ಗೆ ತಿಳಿದಿದೆ. ನಂತರ ದೇಗಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ನನ್ನ ಮಗಳ ಕೆಲವು ಸಹಪಾಠಿಗಳು ಆಕೆಯನ್ನು ಸಲಿಂಗಕಾಮಿ ಎಂದು ಆರೋಪಿಸಿ ಥಳಿಸಿದ್ದಾರೆ. ಈ ಬಗ್ಗೆ ನಾವು ಮುಖ್ಯೋಪಾಧ್ಯಾಯರಿಗೆ ದೂರು ನೀಡಿದ್ದೇವೆ. ಆದರೆ, ಶಾಲೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಮ್ಮ ಮಾತಿಗೆ ಕಿವಿಗೊಡಲಿಲ್ಲ. ಅವಳಿಗೂ ಇಲ್ಲಿ ಓದಲು ಇಷ್ಟವಿಲ್ಲ. ನಮಗೆ ನ್ಯಾಯ ಬೇಕು ಎಂದು ದೂರಿನಲ್ಲಿ ವಿದ್ಯಾರ್ಥಿನಿ ತಾಯಿ ಉಲ್ಲೇಖಿಸಿದ್ದಾರೆ.
ಮತ್ತೊಬ್ಬಳ ಜೊತೆ ಲೆಸ್ಬಿಯನ್ ಸಂಬಂಧವಿದೆ ಎಂದು ಒಪ್ಪಿಕೊಳ್ಳುವಂತೆ ನನ್ನ ಸಹಪಾಠಿಗಳು ಒತ್ತಾಯಿಸುತ್ತಿದ್ದರು. ನಾನು ಒಪ್ಪಿಕೊಳ್ಳದ ಕಾರಣ ಅವರು ಮೊದಲು ನನ್ನ ಗೆಳತಿಯನ್ನು ಮೊದಲು ಥಳಿಸಿದರು. ಬಳಿಕ ನಾನು ಅವರನ್ನು ತಡೆಯಲು ಪ್ರಯತ್ನಿಸಿದಾಗ ನನಗೂ ಹಲ್ಲೆ ಮಾಡಿದರು. ನಾವು ಯಾವುದೇ ತಪ್ಪು ಮಾಡಿಲ್ಲ. ಇದನ್ನು ಶಾಲೆಯ ಅಧಿಕಾರಿಗಳಿಗೆ ತಿಳಿಸಿದರೂ ಅವರು ಒಪ್ಪಿಕೊಳ್ಳಲಿಲ್ಲ. ಬದಲಿಗೆ ಅವರು ನನ್ನ ಮೇಲೆ ಆರೋಪ ಮಾಡಿದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಶಾಲಾ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ದೇಗಂಗಾ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.