ETV Bharat / bharat

ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆ

author img

By

Published : Jun 11, 2021, 4:22 PM IST

ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಕೆಲವು ದಿನಗಳ ನಂತರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಹರ್ದುಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Girl commits suicide after being raped in Aligarh
ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಸ್ಕಾರ್ಫ್​ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ

ಅಲಿಗಢ, ಉತ್ತರ ಪ್ರದೇಶ: ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ತೆರಳಿ ದುಷ್ಕರ್ಮಿಯಿಂದ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದುಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ಮಂಗಳವಾರ ಅತ್ಯಾಚಾರದ ಘಟನೆ ನಡೆದಿದ್ದು, ತನ್ನ ಸಹೋದರಿಯನ್ನು ಗಣೇಶ್ ಎಂಬಾತ ಜೋಳದ ತೋಟಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎಂದು ಬಾಲಕಿಯ ಸಹೋದರ ಆರೋಪಿಸಿದ್ದಾನೆ.

ಇದನ್ನೂ ಓದಿ: ಬಾಲಕಿಯ ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ವೈರಲ್ ಮಾಡಿದ ಪುಂಡರು: ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ

ಘಟನೆಯ ನಂತರ ನನ್ನ ಸಹೋದರಿ ಈ ವಿಚಾರದ ಬಗ್ಗೆ ನನ್ನ ಬಳಿ ಅಥವಾ ನನ್ನ ಕುಟುಂಬದ ಬಳಿ ಏನೂ ಹೇಳಲಿಲ್ಲ. ಮಂಗಳವಾರದಿಂದ ಆಕೆ ಏನೂ ತಿನ್ನದಿರುವ ಕಾರಣವನ್ನು ವಿಚಾರಿಸಿದಾಗ ಘಟನೆಯ ಬಗ್ಗೆ ವಿವರ ನೀಡಿದ್ದಾಳೆ. ನಂತರ ಕುಟುಂಬಸ್ಥರು ಪೊಲೀಸ್​ ಠಾಣೆಯಲ್ಲಿ ದೂರು ನೀಡಿದಾಗ ತಾನು ಮಲಗುವ ಕೋಣೆಯಲ್ಲಿ ಸ್ಕಾರ್ಫ್​ನಿಂದ ನೇಣು ಬಿಗಿದುಕೊಂಡಿದ್ದಾಳೆ ಎಂದು ಮೃತಳ ಸಹೋದರ ಮಾಹಿತಿ ನೀಡಿದ್ದಾನೆ.

ಪೊಲೀಸರು ಐಪಿಸಿ ಸೆಕ್ಷನ್ 376 ಮತ್ತು 306ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.