ETV Bharat / bharat

ಸಾಮೂಹಿಕ ಅತ್ಯಾಚಾರ: ಖಿನ್ನತೆಗೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆಗೆ ಶರಣು - ಈಟಿವಿ ಭಾರತ ಕರ್ನಾಟಕ

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ.

girl-committed-suicide
ಸಾಮೂಹಿಕ ಅತ್ಯಾಚಾರ: ಖಿನ್ನತೆಗೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆ ಶರಣು
author img

By

Published : Mar 19, 2023, 11:08 PM IST

ಅಲ್ವಾರ್(ರಾಜಸ್ಥಾನ): ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಅಲ್ವಾರ್ ಜಿಲ್ಲೆಯ ನೌಗಾವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಅಪ್ರಾಪ್ತ ವಯಸ್ಸಿನ ಬಾಲಕಿಯ ಕುಟುಂಬವು ಮೂವರು ಯುವಕರ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪದ ಕುರಿತು ದೂರು ನೀಡಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಿ ಶೋಧ ಕಾರ್ಯ ನಡೆಸಿದ್ದಾರೆ.

ದನ ಮೇಯಿಸಲು ಹೋಗಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಗ್ರಾಮದ ಮೂವರು ಬಲವಂತವಾಗಿ ಅತ್ಯಾಚಾರವೆಸಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ನಂತರ ಸಂತ್ರಸ್ತೆ ಖಿನ್ನತೆಗೆ ಒಳಗಾಗಿದ್ದು. ಬಾಲಕಿ ಶನಿವಾರ ತಡ ರಾತ್ರಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಯ ಮಾಹಿತಿಯ ಮೇರೆಗೆ ನೌಗಾವಾನ್ ಪೊಲೀಸ್ ಠಾಣಾಧಿಕಾರಿ ಸುನಿಲ್ ಟ್ಯಾಂಕ್ ಮೃತ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮತ್ತು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಮಗಢ ಸಿಎಚ್‌ಸಿಗೆ ಕಳುಹಿಸಿ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ಈ ಘಟನೆಯ ನಂತರ ಆರೋಪಿಗಳನ್ನು ಪತ್ತೆಗೆ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆದರೆ ಆರೋಪಿಗಳು ಪೊಲೀಸರ ಕೈಗೆ ಇನ್ನೂ ಸಿಕ್ಕಿಲ್ಲ. ತನ್ನ ಅಪ್ರಾಪ್ತ ಮಗಳ ಮರಣೋತ್ತರ ಪರೀಕ್ಷೆಗಾಗಿ ರಾಮಗಢ ಸಿಎಚ್‌ಸಿಗೆ ಬಂದಿದ್ದ ಬಾಲಕಿಯ ತಂದೆ ಗ್ರಾಮದ ಮೂವರು ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ತ್ರಿಕೋನ ಪ್ರೇಮಕಥೆ ಆರೋಪ: ಆತ್ಮಹತ್ಯೆಗೆ ಶರಣಾದ ಡಿಜೆ ಅಕ್ಷಯ್ ಕುಮಾರ್

ಕಳೆದ ಮೂರ್ನಾಲ್ಕು ತಿಂಗಳಿಂದ ಆರೋಪಿ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ಮೃತ ಬಾಲಕಿಯ ತಂದೆ ತಿಳಿಸಿದ್ದಾರೆ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಅವರ 16 ವರ್ಷದ ಮಗಳು ಜಮೀನಿನಲ್ಲಿ ಹಸುಗಳನ್ನು ಕಟ್ಟಲು ಹೋಗಿದ್ದಾಗ. ಗ್ರಾಮದ ಮೂವರು ಕಾಮುಕರು ತನ್ನ ಮಗಳನ್ನು ಬೆಟ್ಟದ ಬಳಿಯ ನಿರ್ಜನ ಪ್ರದೇಶದಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದರು. ನಂತರ ಮೂವರೂ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಹೇಗೋ ಮಗಳು ಮನೆಗೆ ತಲುಪಿ ನಡೆದ ಘಟನೆಯನ್ನು ಹೇಳಿದಳು. ಆಗ ಆರೋಪಿಗಳ ಸಂಬಂಧಿಕರಿಗೆ ದೂರು ನೀಡಲು ಹೋದಾಗ ಅವರು ಜಗಳವಾಡಿದರು ಎಂದು ಹೇಳಿದರು.

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ಯುವಕರ ವಿರುದ್ಧ ಮೃತಳ ತಂದೆ ಪ್ರಕರಣ ದಾಖಲಿಸಿದ್ದಾರೆ. ಮೂವರು ಆರೋಪಿಗಳು ವಿವಾಹಿತರಾಗಿದ್ದು, ಎರಡರಿಂದ ಮೂರು ಮಕ್ಕಳ ತಂದೆ ಎಂದು ಹೇಳಲಾಗಿದೆ. ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಠಾಣಾಧಿಕಾರಿ ಸುನೀಲ್ ಟ್ಯಾಂಕ್ ತಿಳಿಸಿದ್ದಾರೆ.

ಇದನ್ನೂ ಓದಿ:ಯುವತಿ ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಕಾರಿನೊಳಗೆ ತಳ್ಳಿದ ಯುವಕ: ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.