ಜೈಪುರ: ಬಾಲಕಿಗೆ ಲಿಫ್ಟ್ ನೀಡುವ ನೆಪದಲ್ಲಿ ಮೂವರು ನಿರ್ಜನ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಧಾರುಣ ಘಟನೆ ಭಾನುವಾರ ತಡರಾತ್ರಿ ಬೆಳಕಿಗೆ ಬಂದಿದೆ.
ಈ ಘಟನೆಯು ಭಂಕ್ರೋಟ ಪೊಲೀಸ್ ಠಾಣೆ ಪ್ರದೇಶದಿಂದ ವರದಿಯಾಗಿದ್ದು, ಹುಡುಗಿ ತನ್ನ ಸ್ನೇಹಿತನೊಂದಿಗೆ ಭಂಕ್ರೋಟ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಹೋಟೆಲ್ನಲ್ಲಿ ಪಾರ್ಟಿಗೆ ಹೋಗಿದ್ದಳು ಎಂದು ತಿಳಿದುಬಂದಿದೆ.
ಪಾರ್ಟಿಯ ಸಮಯದಲ್ಲಿ, ಹುಡುಗಿ ತನ್ನ ಸ್ನೇಹಿತನೊಂದಿಗೆ ಜಗಳವಾಡಿದ್ದಳಂತೆ, ನಂತರ ಅತ ಭಂಕ್ರೋಟ ಪೊಲೀಸ್ ಠಾಣೆ ಪ್ರದೇಶದಲ್ಲಿರುವ 200 ಅಡಿ ಬೈಪಾಸ್ನಲ್ಲಿ ಹುಡುಗಿಯನ್ನು ಬಿಟ್ಟು ಹೋಗಿದ್ದಾನೆ. ಈ ಸಮಯದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಯುವಕರು ಲಿಫ್ಟ್ ನೀಡುವ ನೆಪದಲ್ಲಿ ಹುಡುಗಿಯನ್ನು ಕಾರಿನಲ್ಲಿ ಕುಳಿತುಕೊಳ್ಳುವಂತೆ ಹೇಳಿದ್ದಾರೆ. ಆದರೆ, ಇವರು ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಮುಂಜಾನೆ 3 ಗಂಟೆ ಸುಮಾರಿಗೆ ಬಾಲಕಿ ರಸ್ತೆಯ ಬದಿ ಬಂದು ಕಾರಿನಲ್ಲಿ ಹೋಗುತ್ತಿದ್ದವರನ್ನು ತಡೆದು ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ ಕಾರು ಸವಾರ ಸಂತ್ರಸ್ತ ಬಾಲಕಿಯೊಂದಿಗೆ ಭಂಕ್ರೋಟ ಪೊಲೀಸ್ ಠಾಣೆಗೆ ತಲುಪಿದ್ದಾನೆ.
ಘಟನೆಯ ಸಂಬಂಧ ಬಾಲಕಿಯ ಸ್ನೇಹಿತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಹಾಗೆಯೇ ಘಟನೆ ನಡೆದ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ಕೂಡ ಮಾಡಲಾಗುತ್ತಿದೆ.
ಇನ್ನು ಹುಡುಗಿ ಮತ್ತೆ ಮತ್ತೆ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಾಳಂತೆ. ಇದರಿಂದ ಪೊಲೀಸರು ಸಂದಿಗ್ಧ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.