ರಾಂಚಿ (ಜಾರ್ಖಂಡ್): ರಾಂಚಿ ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮೇಲೆ ಏಳು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಹೇಳಿಕೆ ನೀಡಿದ್ದು, ಈ ಘಟನೆ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರು ತಲೆಮರೆಸಿಕೊಂಡಿದ್ದು, ಶೋಧಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಈ ಕೃತ್ಯ ಆಗಸ್ಟ್ 26ರಂದು ನಡೆದಿದೆ. ಆರೋಪಿಗಳಲ್ಲಿ ಒಬ್ಬ ಸಂತ್ರಸ್ತೆಗೆ ಪರಿಚಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಚಯಸ್ಥ ಬಾಲಕ ಇನ್ನುಳಿದ ಆರು ಜನರು ಕಾಯುತ್ತಿದ್ದ ಸ್ಥಳಕ್ಕೆ ಬಾಲಕಿಯನ್ನು ಬೈಕ್ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಆ ಹುಡುಗರನ್ನು ನೋಡಿದ ಬಾಲಕಿ ಓಡಲು ಯತ್ನಿಸಿದ್ದಾಳೆ. ಆದರೆ ದುರುಳರು ಅವಳನ್ನು ಹಿಡಿದು ತಂದು ದುಷ್ಕೃತ್ಯ ಎಸಗಿರುವುದು ತನಿಖೆಯಿಂದ ತಿಳಿದು ಬಂದಿದೆ.
ಈ ಕೃತ್ಯದ ನಂತರ ಪರಿಚಯಸ್ಥನೇ ಬಾಲಕಿಯನ್ನು ಮನಗೆ ಮರಳಿ ತಂದು ಬಿಟ್ಟಿದ್ದಾನೆ. ಈ ವೇಳೆ ಬಾಲಕಿ ಪೋಷಕರಿಗೆ ನಡೆದ ಘಟನೆ ವಿವರಿಸಿದ್ದಾಳೆ. ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ತಕ್ಷಣ ಕಾರ್ಯಪ್ರ ವೃತ್ತರಾದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಪೊಕ್ಸೊ ಮತ್ತು ಐಪಿಸಿ ಸೆಕ್ಷನ್‌ಗಳನ್ವಯ ಪೊಲೀಸರು ಮೊಕದ್ದಮೆ ದಾಖಲಿಸಿದ್ದು, ಬಂಧಿತರನ್ನು ಬಾಲಮಂದಿರಕ್ಕೆ ಒಪ್ಪಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ₹21 ಕೋಟಿ ಮೌಲ್ಯದ 3,400 ಕೆಜಿ ಹೈಟೆಕ್ ಗಾಂಜಾ ಜಪ್ತಿ: ಎನ್ಸಿಬಿ ಇತಿಹಾಸದಲ್ಲೇ ದೊಡ್ಡ ಕಾರ್ಯಾಚರಣೆ