ನಳಂದಾ(ಬಿಹಾರ): ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಗುಂಡು ತಗುಲಿ 12 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬಿಹಾರದ ನಳಂದ ಜಿಲ್ಲೆಯ ಗಂಜ್ಪರ್ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಬಾಲೋ ಯಾದವ್ ಪುತ್ರಿ ತುಶಿ ಕುಮಾರಿ ಎಂದು ಗುರುತಿಸಲಾಗಿದೆ.
ನೆರೆಮನೆಯ ಕಾರ್ಯಕ್ರಮವೊಂದಕ್ಕೆ ಹೋದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ನೃತ್ಯ ಕಾರ್ಯಕ್ರಮವನ್ನು ವೀಕ್ಷಿಸಲು ಬಾಲಕಿ ತೆರಳಿದ್ದಳು. ಆ ವೇಳೆ ಅಪರಿಚಿತ ವ್ಯಕ್ತಿಯಿಂದ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಗಾಯಗೊಂಡ ಪರಿಣಾಮ ಬಾಲಕಿ ಮೃತಪಟ್ಟಿದ್ದಾಳೆ.
ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದ ಕೆಲ ಯುವಕರು ಕುಡಿತದ ಮತ್ತಿನಲ್ಲಿ ಡ್ಯಾನ್ಸರ್‌ಗಳ ಜೊತೆ ಸೇರಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೀಪ್ನಗರ ಪೊಲೀಸ್ ಠಾಣಾ ಪ್ರಭಾರಿ ಸಂಜಯ್ ಕುಮಾರ್ ಜೈಸ್ಟಾಲ್, ಈ ಪ್ರದೇಶದಲ್ಲಿ ಇಂತಹ ಕಾರ್ಯಕ್ರಮ ಆಯೋಜನೆಯ ಕುರಿತು ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದೇವೆ. ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಯ್ಯೋ ಧುರ್ವಿಧಿಯೇ.. ಹಾರ ಬದಲಾಯಿಸುವ ವೇಳೆ ಕುಸಿದು ಬಿದ್ದು ವಧು ಸಾವು..!