ETV Bharat / bharat

ಹಗಲಲ್ಲೇ ಮನೆಗೆ ನುಗ್ಗಿ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ..​ ಕತ್ತು ಹಿಸುಕಿ ಕೊಂದ ದುರುಳ - ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಉತ್ತರಪ್ರದೇಶದ ಮೈನ್​ಪುರಿ ಜಿಲ್ಲೆಯಲ್ಲಿ ಅತ್ಯಾಚಾರ, ಕೊಲೆ ಘಟನೆ ಬೆಳಕಿಗೆ ಬಂದಿದೆ. ರೇಪ್​ ಮಾಡಿದ್ದರ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಕ್ಕೆ ಯುವಕ ಸಂತ್ರಸ್ತೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

Etv Bharatgirl student murdered after rape in uttara pradesh
ರೇಪ್​ ಮಾಡಿ ಕತ್ತು ಹಿಸುಕಿ ಕೊಂದ ದುರುಳ
author img

By

Published : Oct 6, 2022, 10:15 AM IST

ಮೈನ್‌ಪುರಿ(ಉತ್ತರಪ್ರದೇಶ): ಉತ್ತರಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಮತ್ತು ಕೊಲೆ ಕೇಸ್​ ಬೆಳಕಿಗೆ ಬಂದಿದೆ. ಹಗಲಲ್ಲೇ ಮನೆಗೆ ನುಗ್ಗಿದ ಯುವಕನೊಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ್ದು, ದೂರು ನೀಡುವುದಾಗಿ ಹೇಳಿದ್ದಕ್ಕೆ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಮೈನ್​ಪುರಿ ಜಿಲ್ಲೆಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಬಿಎಸ್​​ಸಿ ಎರಡನೇ ವರ್ಷದ ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಾಕೆ. ವಿದ್ಯಾರ್ಥಿನಿ ತನ್ನ ತಂಗಿಯೊಂದಿಗೆ ಮನೆಯಲ್ಲಿದ್ದಾಗ ಅದೇ ಗ್ರಾಮದ ಯುವಕನೊಬ್ಬ ಹಗಲಲ್ಲೇ ಮನೆಗೆ ನುಗ್ಗಿದ್ದಾನೆ.

ವಿದ್ಯಾರ್ಥಿನಿಯನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ. ಬಳಿಕ ಆಕೆಯ ಮಾನಭಂಗ ಮಾಡಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ದೂರು ನೀಡುವುದಾಗಿ ಬೆದರಿಕೆ ಹಾಕಿದಾಗ, ಯುವಕ ಆಕೆಯ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಬಳಿಕ ಇದು ಕೊಲೆ ಎಂದು ತಿಳಿಯದಿರಲು ವಿದ್ಯಾರ್ಥಿನಿಯನ್ನು ನೇಣು ಹಾಕಿಕೊಂಡ ಸ್ಥಿತಿಯಲ್ಲಿರಿಸಿ ಮನೆಯ ಬಾಗಿಲನ್ನು ಒಳಗಡೆಯಿಂದ ಹಾಕಿ ಪರಾರಿಯಾಗಿದ್ದಾನೆ. ಇದನ್ನು ಕಂಡ ವಿದ್ಯಾರ್ಥಿನಿಯ ತಂಗಿ ಕಿರುಚಾಡಿ ನೆರೆಹೊರೆಯವರನ್ನು ಕರೆದಿದ್ದಾಳೆ.

ಬಳಿಕ ಜನರು ಬಂದು ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಯುವತಿಯ ಸಹೋದರಿ ನಡೆದ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾಳೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.

ಶ್ವಾನದಳ ಹಾಗೂ ವಿಧಿವಿಜ್ಞಾನ ತಜ್ಞರ ತಂಡವನ್ನೂ ಕರೆಸಲಾಗಿದ್ದು, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿ ಗ್ರಾಮದಿಂದ ಪರಾರಿಯಾಗಿದ್ದಾನೆ.

ಓದಿ: ಮೆಕ್ಸಿಕೋದಲ್ಲಿ ಭೀಕರ ದಾಳಿ.. ಗುಂಡೇಟಿಗೆ ಮೇಯರ್​, ಪೊಲೀಸ್​ ಅಧಿಕಾರಿಗಳು ಸೇರಿ 18 ಮಂದಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.