ಜೋಧಪುರ(ರಾಜಸ್ಥಾನ) : ರಾಜಸ್ಥಾನದಲ್ಲಿ ಬೆಚ್ಚಿಬೀಳಿಸುವ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. 4ನೇ ತರಗತಿಯಲ್ಲಿ ಓದುತ್ತಿರುವ ಬಾಲಕನೊಬ್ಬ ತನ್ನ ಸಹಪಾಠಿಯ ಮೇಲೆ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ಏನು?: ಜೋಧಪುರ ಜಿಲ್ಲೆಯ ಮಾತಾ ಕಾ ಥಾನ್ ಎಂಬಲ್ಲಿಯ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕನೊಬ್ಬ ತನ್ನ ಸಹಪಾಠಿ ಬಾಲಕಿಯನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.
ಸಂತ್ರಸ್ತ ಬಾಲಕಿ ನಡೆದ ಘಟನೆಯನ್ನು ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ಬಾಲಕನ ವಿರುದ್ಧ ಸಂತ್ರಸ್ತೆ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕ ಅಪ್ರಾಪ್ತನಾದ ಕಾರಣ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸತ್ಯಾಂಶಕ್ಕಾಗಿ ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪಸತ್ರೆಗೆ ದಾಖಲಿಸಲಾಗಿದೆ.
ಮೊದಲು ಶಿಕ್ಷಕನಿಂದ ರೇಪ್ ಆಗಿತ್ತು : ಪ್ರಕರಣಕ್ಕೂ ಮೊದಲು ಇದೇ ಸಂತ್ರಸ್ತ ಬಾಲಕಿಯ ಮೇಲೆ ನೃತ್ಯ ಶಿಕ್ಷಕನೊಬ್ಬ ಅತ್ಯಾಚಾರ ಮಾಡಿದ್ದ ಆರೋಪವಿದ್ದು, ಶಿಕ್ಷಕ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಇದೀಗ ಅದೇ ಬಾಲಕಿಯ ಮೇಲೆ ಸಹಪಾಠಿಯೇ ಅತ್ಯಾಚಾರ ಮಾಡಿದ್ದಾನೆ ಎಂಬ ದೂರು ದಾಖಲಾಗಿದೆ.
2018ರಲ್ಲಿ ಶಾಲೆಯ ವಾರ್ಷಿಕ ಸಮಾರಂಭದಲ್ಲಿ ನೇಪಾಳ ಮೂಲದ ನೃತ್ಯ ಶಿಕ್ಷಕ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದ. ತಾಯಿ, ತನ್ನ ಮಗಳಿಗೆ ಗುಡ್ಟಚ್, ಬ್ಯಾಡ್ಟಚ್ ಬಗ್ಗೆ ಹೇಳಿಕೊಡುತ್ತಿದ್ದಾಗ ಆಕೆ ಈ ಬಗ್ಗೆ ಹೇಳಿಕೊಂಡಿದ್ದಾಳೆ. ತಾಯಿ ನೀಡಿದ ದೂರಿನ ಮೇರೆಗೆ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಓದಿ : ಹುಟ್ಟಿನಿಂದಲೇ ಈ ಮಗುವಿಗೆ 4 ಕೈ - 4 ಕಾಲು: ಶಸ್ತ್ರಚಿಕಿತ್ಸೆಗಾಗಿ ಬಡ ಪೋಷಕರ ಪರದಾಟ