ಪಣಜಿ(ಗೋವಾ): ಮತ ಎಣಿಕೆಯ ಆರಂಭಿಕ ಟ್ರೆಂಡ್ನಲ್ಲಿ ಗೋವಾದಲ್ಲಿ 18 ಅಸೆಂಬ್ಲಿ ಸ್ಥಾನಗಳಲ್ಲಿ ಭಾರತೀಯ ಜನತಾ ಪಕ್ಷವು ಮುನ್ನಡೆ ಸಾಧಿಸಿದ್ದು, ಒಟ್ಟು ವಿಧಾನಸಭಾ ಕ್ಷೇತ್ರಗಳ ಅರ್ಧದಷ್ಟು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲು ಸಮೀಪದಲ್ಲಿದೆ.
ಭಾರತೀಯ ಚುನಾವಣಾ ಆಯೋಗದ ಅಂಕಿ- ಅಂಶಗಳ ಪ್ರಕಾರ ರಾಜ್ಯದ ಒಟ್ಟು 40 ವಿಧಾನಸಭಾ ಸ್ಥಾನಗಳ ಪೈಕಿ 18 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಾಂಕ್ವೆಲಿಮ್ ಅಸೆಂಬ್ಲಿ ಕ್ಷೇತ್ರದಲ್ಲಿ 605ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಯುಪಿಯಲ್ಲಿ ಸತತ 2ನೇ ಸಲ ಅಧಿಕಾರದತ್ತ BJP.. ನಾಲ್ಕು ದಾಖಲೆ ಬರೆಯಲಿರುವ ಫೈರ್ ಬ್ರ್ಯಾಂಡ್ ಯೋಗಿ!
ಗೋವಾದಲ್ಲಿ ಅಧಿಕಾರ ಹಿಡಿಯಲು 21 ಕ್ಷೇತ್ರಗಳ ಅವಶ್ಯಕತೆ ಇದ್ದು, ಬಿಜೆಪಿ ಸುಮಾರು 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದರಿಂದ ಅಧಿಕಾರ ಬಿಜೆಪಿಗೆ ಒಲಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ಜೊತೆಗೆ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷವು ಐದು ಸ್ಥಾನಗಳಲ್ಲಿ, ಆಮ್ ಆದ್ಮಿ ಪಕ್ಷ ಸಹ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಗೋವಾ ಫಾರ್ವರ್ಡ್ ಪಾರ್ಟಿ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಮತ ಹಂಚಿಕೆಗೆ ಸಂಬಂಧಿಸಿದಂತೆ, ಬಿಜೆಪಿ 33.74ರಷ್ಟು ಮತಗಳನ್ನು ಕಾಂಗ್ರೆಸ್ 23.77 ರಷ್ಟು ಮತಗಳನ್ನು ಗಳಿಸಿದೆ.
ಉಪಮುಖ್ಯಮಂತ್ರಿಯಾಗಿದ್ದ ಚಂದ್ರಕಾಂತ್ ಅವರು ಕ್ವಿಪೆಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದು ಹಿನ್ನಡೆ ಸಾಧಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿ ಉತ್ಪಲ್ ಪರಿಕ್ಕರ್ ಅವರು ಹಿನ್ನಡೆ ಸಾಧಿಸಿದ್ದಾರೆ.