ETV Bharat / bharat

Godhra riots: ತೀಸ್ತಾ ಸೆಟಲ್ವಾಡ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಅಹಮದಾಬಾದ್ ಸೆಷನ್ಸ್ ಕೋರ್ಟ್

author img

By

Published : Jul 20, 2023, 8:32 PM IST

ಒಂದು ದಿನದ ಹಿಂದೆಯಷ್ಟೆ ಸುಪ್ರೀಂಕೋರ್ಟ್​ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಅಂಗೀಕರಿಸಿತ್ತು.

Teesta Setalvad
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್

ಅಹಮದಾಬಾದ್ (ಗುಜರಾತ್​): 2002ರ ಗುಜರಾತ್ ಗೋಧ್ರೋತ್ತರ ಗಲಭೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಬಿಡುಗಡೆಯ ಮನವಿಯನ್ನು ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ಅರ್ಜಿ ವಿಚಾರಣೆ ನಡೆಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ ಆರ್ ಪಟೇಲ್ ಸೆಟಲ್ವಾಡ್ ಅವರು ಮನವಿಯನ್ನು ತಿರಸ್ಕರಿಸಿದರು.

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಅನುಮತಿಸಿದ ಒಂದು ದಿನದ ನಂತರ, ಗುಜರಾತ್‌ನ ಅಹಮದಾಬಾದ್‌ನ ಸಿಟಿ ಸೆಷನ್ಸ್ ನ್ಯಾಯಾಲಯ ಈ ತೀರ್ಪು ನೀಡಿದೆ. ಬಿಡುಗಡೆ ಮಾಡುವಂತೆ ಕೋರಿ ಸೆಟಲ್ವಾಡ್ ಸಲ್ಲಿಸಿದ್ದ ಅರ್ಜಿಯನ್ನು ಅಹಮದಾಬಾದ್‌ನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಪ್ರಧಾನ ನ್ಯಾಯಾಧೀಶೆ ಎ ಆರ್ ಪಟೇಲ್ ತಿರಸ್ಕರಿಸಿದ್ದಾರೆ.

ಗಲಭೆ ಸಂತ್ರಸ್ತರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಅಮಾಯಕರನ್ನು ಸಿಲುಕಿಸಿದ್ದಾರೆ ಎಂದು ಗುಜರಾತ್ ಸರ್ಕಾರ ಆಕೆಯ ಅರ್ಜಿಯನ್ನು ವಿರೋಧಿಸಿತ್ತು. ಗುಜರಾತ್ ಹೈಕೋರ್ಟ್ ತನ್ನ ಬಿಡುಗಡೆ ಅರ್ಜಿಯನ್ನು ನಿರಾಕರಿಸಿದ ನಂತರ ಇದೇ ಪ್ರಕರಣದಲ್ಲಿ ಬುಧವಾರ ಸುಪ್ರೀಂ ಕೋರ್ಟ್ ಸೆಟಲ್ವಾಡ್ ಅವರಿಗೆ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ.ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರೊಂದಿಗೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಲಾಗಿತ್ತು.

ಇದೀಗ ಮೂವರು ಆರೋಪಿಗಳಾದ ಮಾಜಿ ಡಿಜಿಪಿ ಆರ್.ಬಿ. ಶ್ರೀಕುಮಾರ್, ಮಾಜಿ ಐಪಿಎಸ್ ಸಂಜೀವ್ ಭಟ್ ಮತ್ತು ತೀಸ್ತಾ ಸೆಟಲ್ವಾಡ್ ವಿರುದ್ಧ ಚಾರ್ಜ್ ಫ್ರೇಮ್ ಪ್ರಕ್ರಿಯೆ ಮುಂದುವರಿಯಲಿದೆ. 2002ರ ಗುಜರಾತ್​ ಗಲಭೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರು ಅಹಮದಾಬಾದ್ ಸೆಷನ್ಸ್ ಕೋರ್ಟ್‌ಗೆ ಬಿಡುಗಡೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ 5 ದಿನಗಳ ಕಾಲ ನಡೆದಿತ್ತು. ಪ್ರಕರಣದ ವಿಚಾರಣೆ ವೇಳೆ ತೀಸ್ತಾ ಪರ ವಕೀಲರು ಹಾಗೂ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಎರಡೂ ಕಡೆಯವರು ತಮ್ಮ ವಾದವನ್ನು ಜುಲೈ 12 ರಂದು ಪೂರ್ಣಗೊಳಿಸಿದ್ದರು.

ತೀಸ್ತಾ ನೀಡಿದ ಈ ಅರ್ಜಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ವಿರೋಧಿಸಿದರು. ಆರೋಪಿಯ ವಿರುದ್ಧ ಸಿಕ್ಕಿರುವ ಸಾಕ್ಷ್ಯಾಧಾರಗಳು ಮತ್ತು ಅಪರಾಧದ ಗಂಭೀರತೆಯನ್ನು ಪರಿಗಣಿಸಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲು ಸಾಧ್ಯವಿಲ್ಲ. ತೀಸ್ತಾ ಅವರನ್ನು ಬಿಡುಗಡೆ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್​​ಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.