ETV Bharat / bharat

ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿ ಫಾರೂಕ್​ಗೆ ಸುಪ್ರೀಂ ಕೋರ್ಟ್ ಜಾಮೀನು - ಫಾರೂಕ್​ಗೆ ಸುಪ್ರೀಂ ಕೋರ್ಟ್ ಜಾಮೀನು

ಗುಜರಾತ್ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇದು ಅತ್ಯಂತ ಘೋರ ಅಪರಾಧ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 59 ಜನರನ್ನು ಸಜೀವ ದಹನ ಮಾಡಲಾಗಿತ್ತು ಮತ್ತು ಅಪರಾಧಿಗಳ ಮನವಿಯನ್ನು ಶೀಘ್ರವಾಗಿ ಆಲಿಸುವ ಅಗತ್ಯವಿದೆ ಎಂದು ಹೇಳಿದರು.

ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿ ಫಾರೂಕ್​ಗೆ ಸುಪ್ರೀಂ ಕೋರ್ಟ್ ಜಾಮೀನು

author img

By

Published : Dec 15, 2022, 5:24 PM IST

Updated : Dec 15, 2022, 5:38 PM IST

ನವ ದೆಹಲಿ: 2002ರ ಗೋಧ್ರಾ ರೈಲು ಬೋಗಿ ಸುಟ್ಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಫಾರೂಕ್​ಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಈತ ಕಳೆದ 17 ವರ್ಷಗಳಿಂದ ಜೈಲಿನಲ್ಲಿದ್ದಾನೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು.

ಇಷ್ಟು ವರ್ಷ ಅಪರಾಧಿಯು ಜೈಲುವಾಸದಲ್ಲಿ ಕಳೆದಿರುವುದನ್ನು ಪರಿಗಣಿಸಿ ತನ್ನ ಕಕ್ಷಿದಾರನಿಗೆ ಜಾಮೀನು ನೀಡಬೇಕೆಂದು ಅಪರಾಧಿಗಳಲ್ಲಿ ಒಬ್ಬನಾದ ಫಾರೂಕ್ ಪರ ವಕೀಲರು ಪೀಠದ ಎದುರು ವಾದ ಮಂಡಿಸಿದರು. ಗುಜರಾತ್ ಸರ್ಕಾರದ ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇದು ಅತ್ಯಂತ ಘೋರ ಅಪರಾಧ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 59 ಜನರನ್ನು ಸಜೀವ ದಹನ ಮಾಡಲಾಗಿತ್ತು ಮತ್ತು ಅಪರಾಧಿಗಳ ಮನವಿಯನ್ನು ಶೀಘ್ರವಾಗಿ ಆಲಿಸುವ ಅಗತ್ಯವಿದೆ ಎಂದು ಹೇಳಿದರು.

ಸಾಮಾನ್ಯವಾಗಿ ಕಲ್ಲು ತೂರಾಟವು ಸಣ್ಣ ಪ್ರಮಾಣದ ಅಪರಾಧವಾಗಿರುತ್ತದೆ. ಆದರೆ, ತತ್‌ಕ್ಷಣದ ಸಂದರ್ಭದಲ್ಲಿ, ಪ್ರಯಾಣಿಕರು ಹೊರಗೆ ಬರದಂತೆ ನೋಡಿಕೊಳ್ಳಲು ರೈಲಿನ ಬೋಲ್ಟ್‌ಗೆ ಕಲ್ಲುಗಳನ್ನು ತೂರಲಾಗಿತ್ತು. ಇದಕ್ಕೂ ಮೇಲಾಗಿ ಅಗ್ನಿಶಾಮಕ ವಾಹನಗಳ ಮೇಲೂ ಕಲ್ಲು ಎಸೆಯಲಾಗಿತ್ತು ಎಂದು ಮೆಹ್ತಾ ಹೇಳಿದರು.

ಸಬರಮತಿ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಫಾರೂಕ್ ಮತ್ತು ಇತರ ಹಲವರಿಗೆ ಶಿಕ್ಷೆ ವಿಧಿಸಲಾಗಿತ್ತು. ಫೆಬ್ರವರಿ 27, 2002 ರಂದು ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ನ ಎಸ್ -6 ಕೋಚ್​ಗೆ ಬೆಂಕಿ ಹಚ್ಚಿದ್ದರಿಂದ 59 ಜನರು ಸಾವನ್ನಪ್ಪಿದ್ದರು. ಇದು ರಾಜ್ಯದಲ್ಲಿ ಭಾರಿ ಗಲಭೆಗೆ ಕಾರಣವಾಗಿತ್ತು. ಈ ಪ್ರಕರಣದ ಹಲವಾರು ಅಪರಾಧಿಗಳು ತಮಗೆ ನೀಡಲಾದ ಶಿಕ್ಷೆಯ ವಿರುದ್ಧ ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಇದನ್ನೂ ಓದಿ: ಸುಳ್ಳು ಸಾಕ್ಷ್ಯ ಸೃಷ್ಟಿ: ಮತ್ತೆ ಬಂಧನಕ್ಕೊಳಗಾದ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್

Last Updated : Dec 15, 2022, 5:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.