ನವದೆಹಲಿ: ಮುಂದಿನ 12 ರಿಂದ 15 ತಿಂಗಳುಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,500 ರೂಪಾಯಿಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್ ವರದಿ ತಿಳಿಸಿದೆ.
ಕೋವಿಡ್ ಬಿಕ್ಕಟ್ಟಿನ ಮಧ್ಯೆಯೂ ಸರ್ಕಾರ ಘೋಷಿಸಿದ ಕೆಲ ಕ್ರಮಗಳಿಂದಾಗಿ ಆಭರಣದ ಬೇಡಿಕೆ ಮತ್ತು ಪೂರೈಕೆ ನಡುವೆ ವ್ಯತ್ಯಯವುಂಟಾಯಿತು. ಹೀಗಾಗಿ ಚಿನ್ನದ ಬೆಲೆ ಹೆಚ್ಚಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ವಿಶ್ವ ಗೋಲ್ಡ್ ಕೌನ್ಸಿಲ್ ಪ್ರಕಾರ, ಚಿನ್ನದ ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಂಡರೂ, ಪೂರೈಕೆಯಲ್ಲಿ ಮೊದಲಿಗಿಂತ ಶೇ.4 ರಷ್ಟು ಇಳಿಕೆಯಾಗಿದೆ. ಇದೀಗ ಕೋವಿಡ್ ಎರಡನೇ ಅಲೆ ವ್ಯಾಪಿಸುತ್ತಿದ್ದು, ಆರ್ಥಿಕತೆ ಮೇಲೆ ತೀವ್ರ ಪರಿಣಾಮ ಬೀರಿದ್ದು, ಜಾಗತಿಕ ಮಾರುಕಟ್ಟೆಗೆ ದೊಡ್ಡ ಹೊಡೆತ ಬಿದ್ದಿದೆ.
ಇದನ್ನೂ ಓದಿ:ಚಿಲ್ಲರೆ ಹಣದುಬ್ಬರ ಏಪ್ರಿಲ್‌ನಲ್ಲಿ ಶೇ 4.29ಕ್ಕೆ ಇಳಿಕೆ: ಕೈಗಾರಿಕಾ ಉತ್ಪಾದನೆ ಶೇ 22.4ರಷ್ಟು ಏರಿಕೆ
ಇದೆಲ್ಲದರ ಪರಿಣಾಮ ಬಂಗಾರದ ಬೆಲೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.