ಹೈದರಾಬಾದ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಎಲೆಕ್ಟ್ರಿಕ್ ಚಾರ್ಜಿಂಗ್ ಲೈಟ್ನಲ್ಲಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸುಮಾರು 3 ಕೋಟಿ ಮೌಲ್ಯದ, 6 ಕೆ.ಜಿ ಯಷ್ಟು ಚಿನ್ನವನ್ನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಹೈದರಾಬಾದ್ಗೆ ಬಂದಿದ್ದ ವ್ಯಕ್ತಿಯಿಂದ ಈ ಚಿನ್ನವನ್ನ ವಶಪಡಿಸಿಕೊಳ್ಳಲಾಗಿದೆ. ಈ ವ್ಯಕ್ತಿ ತನ್ನ ಲಗೇಜ್ ಬ್ಯಾಗ್ನಲ್ಲಿ ಇಟ್ಟಿದ್ದ ಎಲೆಕ್ಟ್ರಿಕ್ ಚಾರ್ಜಿಂಗ್ ಲೈಟ್ನಲ್ಲಿ ಅಕ್ರಮವಾಗಿ ಚಿನ್ನವನ್ನ ಸಾಗಿಸುತ್ತಿದ್ದ.
ಈ ಬಗ್ಗೆ ಮಾಹಿತಿ ಪಡೆದ ಏರ್ ಪೋರ್ಟ್ನ ಕಸ್ಟಮ್ಸ್ ಅಧಿಕಾರಿಗಳು ವ್ಯಕ್ತಿಯ ಬಳಿ ಇದ್ದ ಚಾರ್ಜರ್ ಪರೀಕ್ಷಿಸಿದಾಗ ಅದರಲ್ಲಿ ಇರುವ ಚಿನ್ನ ಪತ್ತೆಯಾಗಿತ್ತು. ಈ ಚಿನ್ನವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.